Home Local ಗೋಕರ್ಣ ಗೌರವಕ್ಕೆ ಪಾತ್ರಾರಾದ ಶ್ರೀ ಮಡಿವಾಳೇಶ್ವರ ಸ್ವಾಮಿಗಳು.

ಗೋಕರ್ಣ ಗೌರವಕ್ಕೆ ಪಾತ್ರಾರಾದ ಶ್ರೀ ಮಡಿವಾಳೇಶ್ವರ ಸ್ವಾಮಿಗಳು.

SHARE

ಗೋಕರ್ಣ : ಪ.ಪೂ. ಶ್ರೀ ಮಡಿವಾಳೇಶ್ವರ ಸ್ವಾಮಿಗಳು ಶಿವಾನಂದ ಮಠ ಗಾಮನಗಟ್ಟಿ ಹುಬ್ಬಳ್ಳಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

ಉಪಾಧಿವಂತ ಮಂಡಲದ ಸದಸ್ಯರಾದ ವೇ. ವಿನಾಯಕ ಎನ್. ಸಭಾಹಿತ್ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ರಾಮಚಂದ್ರ ಜಂಬೆ ಇವರು ಪೂಜಾ ಕೈಂಕರ್ಯ ನೆರವೇರಿಸಿದರು