Home Important ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

SHARE

ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬಿಜೆಪಿ ಶಾಸಕರು ಹಾಗೂ ಸಂಸದರ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಶಿಕಾರಿಪುರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಕೋಮು ಗಲಭೆ ಮತ್ತು ಹಿಂಸಚಾರ ಸೃಷ್ಟಿಸಿ, ಶಾಂತಿ ಭಂಗವನ್ನುಂಟು ಮಾಡುತ್ತಿರುವ ಬಿಜೆಪಿ ವಿರುದ್ಧ, ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ದರ್ಶನ್ ಉಳ್ಳಿ ಸೇರಿದಂತೆ ತಾಲ್ಲೂಕು ಮುಖಂಡರು ಭಾಗಿಯಾಗಿದ್ದರು.

ಈ ವೇಳ ಬಿಜೆಪಿ ವಿರುದ್ಧ ಭಾರಿ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.