Home Important ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬರುವ ಬಗ್ಗೆ ಸಿಎಂ ಮಾತು.

ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬರುವ ಬಗ್ಗೆ ಸಿಎಂ ಮಾತು.

SHARE

ಕಲಬುರಗಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬರುವುದಿಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜಕೀಯಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಷಯ ಎಂದರು.

ಸದ್ಯ ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರ ಸ್ವೀಕರಿಸಿದ್ದಾರೆ. ಅವರಿಗೆ ಸೋನಿಯಾ ಗಾಂಧಿ ಅವರು ರಾಜಕೀಯವಾಗಿ ಮಾರ್ಗದರ್ಶನ ನೀಡುತ್ತಾರೆ. ಪ್ರಿಯಾಂಕಾ ಗಾಂಧಿ ಅವರೂ ರಾಹುಲ್ ಗಾಂಧಿಗೆ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು. ರಾಹುಲ್ ಗಾಂಧಿಗೆ ಅಧಿಕಾರ ಬಂದಿದ್ದಾರೆ, ನಂತರ ಮುಂದಿನ ದಿನಗಳಲ್ಲಿ ಪಕ್ಷ ಬಲವರ್ಧನೆಯಾಗಲಿದೆ. ರಾಹುಲ್ ಗಾಂಧಿ ಅವರು ಯುವಕರಿಗೆ ಆದ್ಯತೆ ನೀಡಲಿದ್ದಾರೆ. ಆದರೆ ಹಿರಿಯರು ನಿವೃತ್ತಿಯಾಗಲಿ ಎಂಬುದು ಅದರ ಅರ್ಥವಲ್ಲ. ಹಿರಿಯರ ಮಾರ್ಗದರ್ಶನದೊಂದಿಗೆ ರಾಹುಲ್ ಗಾಂಧಿ ಪಕ್ಷ ಮುನ್ನಡೆಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.