Home Important ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ: ಅಮಿತ್ ಶಾ

ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ: ಅಮಿತ್ ಶಾ

SHARE

ನವದೆಹಲಿ: ಗುಜರಾತ್, ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಅಷ್ಟೇ ಅಲ್ಲ ವಂಶಾಡಳಿತ, ಜಾತಿ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಬಿಜೆಪಿ ಗೆಲುವು ಪ್ರಜಾಸತ್ತಾತ್ಮಕ ಗೆಲುವು. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.

ಸೋಮವಾರ ಗುಜರಾತ್, ಹಿಮಾಚಲಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್, ಹಿಮಾಚಲ ಪ್ರದೇಶ ಜನತೆಗೆ ಅಭಿನಂದನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿಕಾಸ ಯಾತ್ರೆಯಲ್ಲಿ ಜನರು ನಂಬಿಕೆ ಇಟ್ಟಿದ್ದಾರೆ.ಇದು ದೇಶದ ಸುಧಾರಣೆಗೆ ಜನರು ನೀಡಿದ ಉಡುಗೊರೆ. ಈಗ ಕರ್ನಾಟಕ ಚುನಾವಣೆ ಗೆಲ್ಲುವುದೇ ನಮ್ಮ ಗುರಿ ಎಂದು ಹೇಳಿದರು.