ಬೆಂಗಳೂರು: ಗುಜರಾತ್ ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಕರ್ನಾಟಕ ರಾಜ್ಯ ಮೇಲೆ ಕಣ್ಣುಹಾಯಿಸಿದ್ದು, ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ಡಿ.31ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಹೊಸವರ್ಷದ ಮುನ್ನಾ ದಿನ ನಗರಕ್ಕೆ ಆಗಮಿಸುವ ಅಮಿತ್ ಶಾ ಅವರು ದಿನವಿಡೀ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜುಗೊಳಿಸಲಿದ್ದಾರೆ.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಕೋರ್ ಕಮಿಟಿ ಸಭೆ ವೇಳೆ ಪಕ್ಷದ ಚುನಾವಣಾ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಅಮಿತ್ ಶಾ ಅವರು ನಗರಕ್ಕೆ ಭೇಟಿ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

RELATED ARTICLES  ಶ್ರೀ ರಾಮಚಂದ್ರಾಪುರ ಮಠದ ಪರವಾಗಿ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಈ ಮಾಹಿತಿಯನ್ನು ತಿಳಿಸಿದರು.

ಕಳೆದ ಆಗಸ್ಟ್ ನಲ್ಲಿ 3 ದಿನಗಳ ಕಾಲ ರಾಜ್ಯಕ್ಕೆ ಆಗಮಿಸಿದ್ದ ಶಾ ಅವರು ಪಕ್ಷದ ಎಲ್ಲಾ ಹಂತದ ಮುಖಂಡರೊಂದಿಗೆ ಸುದೀರ್ಘವಾಗಿ ಸಮಾಚನೆ ನಡೆಸಿ ಹಲವು ಲೋಪದೋಷಗಳನ್ನು ಎತ್ತಿ ತೋರಿಸಿದ್ದರು, ಜೊತೆಗೆ ಪಕ್ಷದ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ಏನೇನು ಮಾಡಬೇಕು ಎಂಬುದನ್ನೂ ಹೇಳಿ ವಾಪಸ್ಸಾಗಿದ್ದರು. ಅವರ ಸೂಚನೆಯಂತೆಯೇ ಯಡಿಯೂರಪ್ಪ ನೇತೃತ್ವದಲ್ಲಿ ಪರಿವರ್ತನಾ ಯಾತ್ರೆ ಆರಂಭವಾಗಿದ್ದು, ಯಶಸ್ವಿಯಾಗಿ ನಡೆಯುತ್ತಿದೆ ಎಂದು ಲಿಂಬಾವಳಿಯವರು ಹೇಳಿದ್ದಾರೆ.

RELATED ARTICLES  ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ನ್ಯಾಯಾಂಗ ಬಂಧನ.

ಡಿ.31ರಂದು ಶಾ ಅವರ ನೇತೃತ್ವದಲ್ಲಿ ಅಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಅಲ್ಲದೆ, ತಮ್ಮ ಕ್ಷೇತ್ರದ ಜೊತೆಗೆ ಹೆಚ್ಚುವರಿಯಾಗಿ ಮತ್ತೊಂದು ಕ್ಷೇತ್ರದ ಉಸ್ತುವಾರಿ ಹೊಂದಿರುವ ಲೋಕಸಭಾ, ವಿಧಾನಸಭಾ ಮತ್ತು ವಿಧಾನಪರಿಷತ್ ಸದಸ್ಯರೊಂದಿಗೂ ಸಭೆ ನಡೆಸಿ ಪ್ರಗತಿಯ ಪರಿಶೀನೆ ನಡೆಸಲಿದ್ದಾರೆ.

ಪಕ್ಷದ ವತಿಯಿಂದ ಪರಿವರ್ತನಾ ಯಾತ್ರೆ ಪೂರ್ಣಗೊಂಡಿರುವ ಸುಮಾರು 170 ಕ್ಷೇತ್ರಗಳಲ್ಲಿ ನವಶಕ್ತಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಈ ಸಮಾವೇಶಗಳ ದಿನಾಂಕ ನಿಗದಿಯಾಗಿದೆ. ಯಾತ್ರೆ ಮುಂದುವರೆಯಲಿದ್ದು, ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗುತ್ತಾದೆ. ಉಳಿದಂತೆ ಪಕ್ಷದ ನಾಯಕರು ನವಶಕ್ತಿ ಸಮಾವೇಸಗಳಲ್ಲಿ ಪಾಲ್ಗೊಳ್ಳುವರು ಎಂದು ಲಿಂಬಾವಳಿ ತಿಳಿಸಿದ್ದಾರೆ.