ಕಾರವಾರ :-ಪರೇಶ ಮೇಸ್ತಾ ಸಾವಿನ ನಂತರ ನಡೆದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದು ಅಮಾಯಕರಿಗೆ ಯಾವುದೇ ತೊಂದರೆಯಾಗಿಲ್ಲ, ಕೋಮು ಗಲಭೆಯಲ್ಲಿ ಭಾಗಿಯಾಗಿ ಕಲ್ಲು ತೂರಿದವರ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಆರ್.ವಿ ದೇಶಪಾಂಡೆ ಹೇಳಿದರು. ಅವರು ಕಾರವಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಮೇಸ್ತಾ ಕುಟುಂಬಕ್ಕೆ ಹಣ ನೀಡಿದಾಗ ಮರಳಿ ನೀಡುವುದಾಗಿ ಹೇಳಿದ್ದಾರೆ. ಅವರ ಕುಟುಂಬದವರಲ್ಲಿ ಒಬ್ಬರಿಗೆ ಕೆ.ಡಿ.ಡಿ.ಸಿ ಬ್ಯಾಂಕ್ ನಲ್ಲಿ ಕೆಲಸ ಕೊಡಲು ತಯಾರಿದ್ದೆವು ಅದನ್ನೂ ತಿರಸ್ಕರಿಸಿದ್ದಾರೆ, ಇದೆಲ್ಲವನ್ನು ಗಮನಿಸಿದರೆ ಕಮಲಾಕರ್ ಮೇಸ್ತಾ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.
ಕೋಮು ಗಲಭೆಯಲ್ಲಿ ಬಿಜೆಪಿ ಹಾಗೂ ಅದರ ಸಂಘಟನೆ ಮಾತ್ರ ಭಾಗಿಯಾಗಿವೆ, ಕೋಮು ಗಲಭೆಯಲ್ಲಿ ಭಾಗಿಯಾಗಿ ಕಲ್ಲು ತೂರಿದವರ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಲಾಗಿದೆ. ಅಮಾಯಕರಿಗೆ ಯಾವುದೇ ತೊಂದರೆಯಾಗಿಲ್ಲ . ಯಾರು ಕಾನೂನು ಕೈಗೆ ತೆಗೆದುಕೊಂಡಿದ್ದಾರೋ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದರು.