ಮಂಗಳೂರು: ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕೇವಲ ರಾಜಕೀಯ ಮಾಡುತ್ತಿವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಮಹದಾಯಿ ನೀರು ಪಡೆಯುವುದಕ್ಕೆ ಎರಡು ದಾರಿಗಳಿವೆ. ಒಂದೋ ಪ್ರಧಾನಿ ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ 7.56 ಟಿಎಂಸಿ ನೀರು ಬಳಕೆ ಮಾಡಲು ಆದೇಶಿಸಬೇಕು. ಇಲ್ಲವೇ ಮೂರೂ ರಾಜ್ಯಗಳು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿ, ನೀರು ಬಿಡುಗಡೆಗೆ ಅಭ್ಯಂತರ ಇಲ್ಲ ಎಂದು ಹೇಳಬೇಕು. ಪರಿಕ್ಕರ್ ಅವರು, ಯಡಿಯೂರಪ್ಪ ಅವರಿಗೆ ಪತ್ರ ಬರೆಯುವುದರಿಂದ ಪರಿಹಾರ ದೊರೆಯುವುದಿಲ್ಲ ಎಂದು ತಿಳಿಸಿದರು.

RELATED ARTICLES  ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಮಲ್ಲಿಕಾರ್ಜುನ ಖರ್ಗೆ

ಎತ್ತಿನಹೊಳೆಯಿಂದ ನೀರು ಹರಿಯುವುದಿಲ್ಲ. ಬದಲಾಗಿ ಹಣದ ಹೊಳೆ ಹರಿಯುತ್ತಿದೆ ಎಂದ ಅವರು, ಎತ್ತಿನಹೊಳೆಯಿಂದ ನೀರು ಸಿಗುವುದಾದರೆ, ₹1,500 ಕೋಟಿ ವರ್ಷದ ವೆಚ್ಚದಲ್ಲಿ ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.

RELATED ARTICLES  ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಸಂತೋಷದಿಂದ ಇಲ್ಲ ; ಎಚ್.ಡಿ.ಕುಮಾರಸ್ವಾಮಿ