ಹೊನ್ನಾವರ : ತಾಲೂಕಿನ ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ಇಂದು ನೇರವೆರಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಎಂ.ಪಿ.ಕರ್ಕಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಎಂ.ಎಲ್.ಸಾಮಗ, ಇವರು ಮಾತಿನಲ್ಲಿ ಸತ್ಯತೆ, ಪ್ರೀತಿ, ಸ್ಫಷ್ಟತೆಯಿರಲಿ, ಬಾಳಿನಲ್ಲಿ ಶಾಂತಿಯಿರಲಿ ಎಂಬ ಹಿತನುಡಿದರು. ನಮ್ಮ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಏಳಿಗೆಗಾಗಿ ವಿವಿಧ ತರಬೇತಿಗಳು ನಿರಂತರವಾಗಿ ನಡೆಯುತ್ತಿವೆ. ಅದರ ಸದುಪಯೋಗವನ್ನು ಪಡೆಯಬೇಕೆಂದು ನಮ್ಮ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ. ಕೃಷ್ಣಮೂರ್ತಿ ಭಟ್ ಇವರು ಕರೆ ನೀಡಿದರು.

RELATED ARTICLES  ಕ್ರಿಮ್ಸ್ ಆಸ್ಪತ್ರೆಯಿಂದ 6 ಕೊರೊನಾ ಸೋಂಕಿತರು ಡಿಶ್ಚಾರ್ಜ

ಸಭಾಧ್ಯಕ್ಷತೆ ವಹಿಸಿದ ಪ್ರಾಚಾರ್ಯರಾದ ಶ್ರೀ. ಎಂ.ಎಚ್. ಭಟ್ಟ ರವರು ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ಅತ್ಯಗತ್ಯ, ಅದನ್ನು ಗುರುತಿಸುವ ಕೆಲಸ ನಮ್ಮ ಸಂಸ್ಥೆ ಮಾಡುತ್ತಿದೆ ಅಂತೆಯೇ ಎಲ್ಲ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ಸಾಧಕರಾಗಬೇಕೆಂದು ಕಿವಿಮಾತನ್ನು ಹೇಳಿದರು.

ಚದುರಂಗ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯಮಟ್ಟದಲ್ಲಿ ಸಾಧನೆಯನ್ನು ಮಾಡಿದ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿ ಸಮರ್ಥ ಜೆ. ರಾವ್ ಇವನನ್ನು ಸನ್ಮಾನಿಸಲಾಯಿತು. ಪ್ರೊ. ಎನ್.ಜಿ. ಅನಂತಮೂರ್ತಿ ಇವರು ವಾರ್ಷಿಕ ವರದಿಯನ್ನು ವಾಚಿಸಿದರು. ಸಂಸ್ಥೆಯ ಜಂಟಿ ಕಾರ್ಯದರ್ಶಿಯಾದ ಎಸ್.ಎಂ.ಭಟ್ಟ, ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾದ ಗಿರೀಶ ನಾಯ್ಕ, ಕ್ರೀಡಾ ಕಾರ್ಯದರ್ಶಿಯಾದ ಸಚಿನ್ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ. ವಿದ್ಯಾಧರ ನಾಯ್ಕ ಗಣ್ಯರನ್ನು ಸ್ವಾಗತಿಸಿದರು. ಶ್ರೀ. ನಿಜಲಿಂಗಪ್ಪ ಎಚ್. ಇವರು ವಂದನಾರ್ಪಣೆಯನ್ನು ಸಲ್ಲಿಸಿದರು. ಶ್ರೀ. ವಿನಾಯಕ ಭಟ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. .

RELATED ARTICLES  ಕುಮಟಾ ಬ್ಲಾಕ್ ಕಾಂಗ್ರೆಸ್ ನ ನೂತನ ಕಾರ್ಯಾಲಯ ಉದ್ಘಾಟನೆ