ಮಂಡ್ಯ: ‘ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಯಡಿಯೂರಪ್ಪಜೀ ಕ್ಯಾಂಟೀನ್ ತೆರೆಯಲು ನಿರ್ಧರಿಸಲಾಗಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಜಿತೇಂದ್ರ ಹೇಳಿದ್ದಾರೆ.

‘ದುಡಿಯುವ ಬಡವರು, ರೈತರು, ಆಟೊ ಚಾಲಕರು, ಕಾರ್ಮಿಕರಿಗೆ ಅನುಕೂಲವಾಗಲು ₹ 5ಕ್ಕೆ ಉಪಹಾರ ಹಾಗೂ ಊಟ ನೀಡಲಾಗುವುದು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು’ ಎಂದು ಮಾಹಿತಿ ನೀಡಿದರು.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 06-03-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಜೊತೆಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವೆಲ್ಲವನ್ನು ಮನಗಂಡು ಹಸಿವು ನೀಗಿಸುವ ಉದ್ದೇಶದಿಂದ ಅವರ ಹೆಸರಿನಲ್ಲಿ ಕ್ಯಾಂಟೀನ್‌ ತೆರೆಯಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ನಗರದ ಸುಭಾಷ್‌ ನಗರದ ಒಂದನೇ ತಿರುವಿನಲ್ಲಿ ಕ್ಯಾಂಟೀನ್‌ ತೆರೆಯಲಾಗುವುದು’ ಎಂದು ತಿಳಿಸಿದರು.

RELATED ARTICLES  ಖಡ್ಡಾಯ ಮಲೆಯಾಳಿ ಭಾಷಾ ಹೇರಿಕೆ ವಿರುದ್ಧ ಪ್ರತಿಭಟನೆ.