ಕುಮಟಾ: ತಾಲೂಕಿನ ಬರ್ಗಿಯ ಸ.ಹಿ.ಪ್ರಾ. ಶಾಲೆ (ನಂ.1 ) ಯ ವಾರ್ಷಿಕ ಸ್ನೇಹ ಸಮ್ಮೇಳನವು ಅತ್ಯಂತ ಸಂಭ್ರಮದಿಂದ ಜರುಗಿತು.

ಈ ಸಂದಂರ್ಭದಲ್ಲಿ ಬಿ.ಜೆ.ಪಿ. ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ವರ್ಷಪೂರ್ತಿ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳಿಗೆ ಇಂತಹ ವಾರ್ಷಿಕ ಸ್ನೇಹ ಸಮ್ಮೇಳನಗಳು ಮನಸ್ಸಿಗೆ ಮುದ ನೀಡುವುದರಿಂದ ಇಂತಹ ಕಾರ್ಯಕ್ರಮಗಳು ಅತ್ಯಗತ್ಯವಾಗಿದೆ. ಒಂದು ಶೈಕ್ಷಣಿಕ ವರ್ಷದಲ್ಲಿ ಮಗುವಿನ ಶೈಕ್ಷಣಿಕ, ಸಾಂಸ್ಕøತಿಕ, ಕ್ರೀಡೆ ಹಾಗೂ ಇನ್ನಿತರೇ ಸಾಧನೆಗಳನ್ನು ಈ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳಬಹುದಾಗಿದೆ. ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಅತ್ಯಗತ್ಯವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆಗಮಾತ್ರ ಪರಿಪೂರ್ಣರಾಗಲು ಸಾಧ್ಯ. ಪಾಲಕರು ಕೂಡಾ ವಿದ್ಯಾರ್ಥಿಗಳ ಆಸಕ್ತಿಯನ್ನು ಅರಿತು ಅದಕ್ಕೆ ಅನುಗುಣವಾಗಿ ಅವರಿಗೆ ಪ್ರೋತ್ಸಾಹ ನೀಡಬೇಕು.. ಪಾಲಕರು ತಮ್ಮ ಆಕಾಂಕ್ಷೆಗಳನ್ನು ಬಲವಂತವಾಗಿ ಮಕ್ಕಳ ಮೇಲೆ ಹೇರಬಾರದು ಎಂದು ಸಲಹೆ ನೀಡಿದರು.

RELATED ARTICLES  ಭಟ್ಕಳ: ಲಾಕ್ ಡೌನ್ ಉಲ್ಲಂಘನೆ : ದಾಖಲಾದ ಪ್ರಕರಣಗಳು ಎಷ್ಟು ಗೊತ್ತೇ?

IMG 20180101 WA0001

ಈ ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಪ್ರದೀಪ ನಾಯಕ ದೇವರಬಾವಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿಕೊಂಡು ಸತತ ಪರಿಶ್ರಮದಿಂದ ಮುಂದುವರಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.

RELATED ARTICLES  ಪರಿಸರ ಪ್ರೇಮಿ,ಸರಳ,ಸಜ್ಜನಶ್ರೀ ಎಂ.ಆರ್.ಹೆಗಡೆ ಇನ್ನು ನೆನಪು ಮಾತ್ರ

ಈ ಸಂದಂರ್ಭದಲ್ಲಿ ತಾ.ಪಂ. ಅಧ್ಯಕ್ಷೆ ವಿಜಯಾ ಪಟಗಾರ, ಈಶ್ವರ ನಾಯ್ಕ, ಲಕ್ಷ್ಮಣ ಪಟಗಾರ, ರಮೇಶ ಹೊಸಮನೆ, ದಯಾನಂದ ಪಟಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.