ಕುಮಟಾ: ಇಲ್ಲಿಯ ಚಿತ್ರಿಗಿ ಮಹಾತ್ಮಾ ಗಾಂಧಿ ಪ್ರೌಢಶಾಲೆಗೆ ವಿಶೇಷ ತಪಾಸಣೆಗಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಬ್ದುಲ್ ಗಪಾರ್ ಮುಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪರೀಕ್ಷಾ ಅಭ್ಯಾಸಕ್ರಮದ ಬಗ್ಗೆ ಜಾಗೃತಿ ಮೂಡಿಸಿದರು.
ವಿದ್ಯಾರ್ಥಿಗಳು ಓದಿ ಮನನ ಮಾಡಿ ಬರೆಯುವುದನ್ನು ರೂಢಿಸಿಕೊಂಡಾಗ ಹೆಚ್ಚಿನ ಅಂಕಗಳಿಸಲು ಸಾಧ್ಯವೆಂದರು. ಕೇವಲ ಅಂಕಗಳಿಕೆಗಿಂತ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವೆಂದು ಅಭಿಪ್ರಾಯಪಟ್ಟರು.
ಬಿಆರ್‍ಸಿ ಅಶೋಕ ರಾಯ್ಕರ ಪಾಠ ವೀಕ್ಷಣೆಗೈದರು. ಮುಖ್ಯಾಧ್ಯಾಪಕ ಎನ್.ಆರ್.ಗಜು ಹಾಗೂ ಎಲ್ಲ ಶಿಕ್ಷಕವೃಂದದವರು ಶಾಲಾ ಚಟುವಟಿಕೆಗಳ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.