ಕುಮಟಾದಲ್ಲಿ ಬಿಜೆಪಿಯಿಂದ ಬೃಹತ್ ಸಾರ್ವಜನಿಕ ಜನ ಸಂಪರ್ಕ ಸಭೆ

ಕುಮಟಾ : ಕುಮಟಾದ ನಾಮಧಾರಿ ಸಭಾಭವನದಲ್ಲಿ ನಡೆದ ಸಾರ್ವಜನಿಕ ಸಂಪರ್ಕ‌ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು.

ರಾಜ್ಯಾದ್ಯಂತ ಬರ ಅಧ್ಯಯನ ಹಾಗೂ ಸಾರ್ವಜನಿಕ ಸಂಪರ್ಕ ಸಭೆಯನ್ನು ನಡೆಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ತಾಲೂಕಿನ ನಾಮಧಾರಿ ಸಭಾಭವನ ದಲ್ಲಿ ಜನಸಂಪರ್ಕ ಸಭೆ ಉದ್ದೇಶಿಸಿ ಮಾತನಾಡಿದರು.

RELATED ARTICLES  ಹೆಚ್ಚುತ್ತಿದೆ ಸೈಬರ್‌ ವಂಚಕರ ಜಾಲ : ಪೊಲೀಸ್ ನೀಡಿದ ಮಾಹಿತಿ ಏನು?

“ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ರೈತ ಸಾಲ ತುಂಬಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಆದ್ದರಿಂದ ಈ ಕೂಡಲೇ ಮಾನ್ಯ ಮುಖ್ಯಮಂತ್ರಿಗಳು ರೈತರ ಸಾಲ ಮನ್ನಾ ಮಾಡಬೇಕು ಇಲ್ಲದೇ ಇದ್ದಲ್ಲಿ ಬೃಹತ್ ಸಂಖ್ಯೆಯಲ್ಲಿ ರೈತರ ಜೊತೆಗೂಡಿ ಉಗ್ರ ಹೋರಾಟ ಮಾಡಲಾಗುವದು” ಎಂದರು.

ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಸನ್ಮಾನ ಮಾಡಲಾಯಿತು. ವೇದಿಕೆಮೇಲೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಂತ ಕುಮಾರ್ ಹೆಗಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ್ ಮಾಜಿ ಸಚಿವರಾದ ಶಿವಾನಂದ ನಾಯ್ಕ್ , ಕುಮಾರ ಬಂಗಾರಪ್ಲ , ಮಾಜಿ ಶಾಸಕರಾದ ದಿನಕರ ಶೆಟ್ಟಿ , ಗಂಗಾಧರ ಭಟ್, ಜೆ.ಡಿ ನಾಯ್ಕ್ , ಸುನಿಲ್ ಹೆಗಡೆ ,ವಿ ಎಸ್ ಪಾಟೀಲ್ ಹಾಗೂ ಬಿಜೆಪಿ ಮುಖಂಡರಾದ ಸುಬ್ರಾಯ ವಾಳ್ಕೆ, ಸೂರಜ್ ನಾಯ್ಕ್ ಸೋನಿ , ನಾಗರಾಜ್ ನಾಯ್ಕ್ ತೊರ್ಕೆ ಉಪಸ್ಥಿತರಿದ್ದರು.

RELATED ARTICLES  ಸಂಪನ್ನಗೊಂಡ ಸ್ಪರ್ಧೆ, ವಿಜೇತರಿಗೆ ಬಹುಮಾನ ವಿತರಣೆ.