ಹೊನ್ನಾವರ : ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು.
ಶಾಲೆಯೂ ಒಂದು ಊರಿನ ಕೇಂದ್ರ ಬಿಂದು ಶಾಲೆಯಲ್ಲಿ ಏನಾದರೂ ಕೊರತೆಯಿದ್ದರೆ ಆ ಊರು ಸಮಗ್ರ ಅಭಿವೃದ್ದಿಯಾಗಿಲ್ಲ ಎಂದರ್ಥ. ಶಾಲೆಯ ವಾರ್ಷಿಕೋತ್ಸವವನ್ನು ಇಷ್ಟೊಂದು ಅಚ್ಚುಕಟ್ಟು ಹಾಗು ವಿಜೃಂಬಣೆಯಿಂದ ಮಾಡುತ್ತಿರುವುದು ನೋಡುತ್ತಿದ್ದರೆ ಈ ಊರಿನ ಜನರು ಶಾಲೆಯ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿರುವುದು ಕಂಡು ಬರುತ್ತದೆ. ಇಲ್ಲಿನ ಯುವಕ ಸಂಘ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಶಾಲೆಯ ಅಭಿವೃದ್ದಿಯ ಕಡೆ ಹೆಚ್ಚಿನ ಗಮನ ಹರಿಸಬೇಕು ಶಾಲೆಯಲ್ಲಿ ಇರುವ ಕೊರತೆಯನ್ನು ಸರಿಪಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶೇ.80% ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಗೂ ಊರಿನ ಗಣ್ಯರು ವೇದಿಕೆಯಲ್ಲಿದ್ದರು.