ಶಿರಸಿ ( ಕಾರವಾರ ) : ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ಶಿರಸಿ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆ ನಡೆಯಿತು.

ತಾ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ , ನಗರದಲ್ಲಿ ಶಿಥಿಲಾವಸ್ಥೆಯ ಕಟ್ಟಡಗಳನ್ನು ತೆರವು ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.

RELATED ARTICLES  ಕಾರ್ಮಿಕರಿಗೆ ಕಿಟ್ ವಿತರಣೆ ಗೊಂದಲ : ಜನರ ಜೊತೆ ಸಮಾಲೋಚನೆ

ಸಭೆಯಲ್ಲಿ ಹೊಸ ಬಸ್ ನಿಲ್ದಾಣದ ಬಳಿಯ ಮದ್ಯದಂಗಡಿ ಮಾಡಿಸುವ ಬಗ್ಗೆ ಪ್ರಸ್ತಾಪವಾಯಿತು. ಈ ವೇಳೆ ಅಧಿಕಾರಿಗಳ ವಿರುದ್ಧ ಗರಂ ಆದ ಶಾಸಕರು, ತಕ್ಷಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ತಾ.ಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ಎಸಳೆ, ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹೆಗಡೆ, ಜಿಪಂ ಸದಸ್ಯರಾದ ಬಸವರಾಜ ದೊಡ್ಮನಿ, ಪ್ರಭಾವತಿ ಗೌಡ, ಉಷಾ ಹೆಗಡೆ, ತಾಪಂ ಇಓ ಆನಂದ ಧುರಿ ಮುಂತಾದವರು ಇದ್ದರು.

RELATED ARTICLES  ಹೊನ್ನಾವರದಲ್ಲಿ ಅತ್ಯಾಚಾರ ಪ್ರಕರ್ಣ