ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್’ಸಿ ಮತ್ತು ಎಸ್’ಟಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ವ್ಯಕ್ತಪಡಿಸಿ, ಮಸೂದೆಯ ಬಗ್ಗೆ ಸಮಗ್ರವಾದ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಮೈಸೂರು ನಗರಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಸ್’ಸಿ, ಎಸ್’ಟಿ ಕಾಯ್ದೆ ಕುರಿತಂತೆ ರಾಷ್ಟ್ರಪತಿ ಕೋವಿಂದ್ ಅವರಿಗೆ ವಿವರಣೆ ನೀಡಿದ್ದರು. ಎಸ್ಸಿ, ಎಸ್ಟಿ ಪಂಗಡಗಳಿಗೆ ಸರ್ಕಾರ ನೀಡುತ್ತಿರುವ ಅನುದಾನ, ಅನುದಾನ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ಧ ತೆಗೆದುಕೊಳ್ಳುವ ಕ್ರಮಗಳ ಕುರಿತು ಮಾಹಿತಿ ನೀಡಿದ್ದರು.

RELATED ARTICLES  ಜಿಯೋಗೆ ಮತ್ತೆ ಸೆಡ್ಡು; ಏರ್’ಟೆಲ್ ನಿಂದ ಹೊಸ 29 ರೂ ಮತ್ತು 49ರೂ ಪ್ರೀಪೇಯ್ಡ್ ಪ್ಲ್ಯಾನ್!

ಸದ್ಯ ಎಸ್’ಸಿ, ಎಸ್’ಟಿ ಕಾಯ್ದೆ ಜಾರಿಗೆ ತಂದಿರುವ ಸರ್ಕಾರದ ಕ್ರಮದ ಬಗ್ಗೆ ಮತ್ತು ಅದರ ಅನುಷ್ಠಾನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಕಾಯ್ದೆಯನ್ನು ಇತರೆ ರಾಜ್ಯಗಳು ಪಾಲನೆ ಮಾಡುವಂತೆ ಸೂಚಿಸಲು ಕಾಯ್ದೆ ಕುರಿತ ವಿವರಣಾತ್ಮಕ ಪ್ರತಿಯೊಂದನ್ನು ಕಳುಹಿಸಿಕೊಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES  ಐಪಿಎಲ್​​​ ಆಟಗಾರರಿಗೆ ಗುಡ್ ನ್ಯೂಸ್..!