ಹುಬ್ಬಳ್ಳಿ: ವಿಜಯಪುರ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕೊರೆಗಾಂವ್ ಗಲಭೆ ಹಾಗೂ ಕೇಂದ್ರ ಸಚಿವ ಅನಂತ್‍ಕುಮಾರ್ ಹೇಳಿಕೆ ಖಂಡಿಸಿ ಹುಬ್ಬಳ್ಳಿ- ಧಾರವಾಡದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ, ಬಂದ್ ಗೆ ಕರೆ ನೀಡಲಾಗಿದೆ.

ಇಲ್ಲಿಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿನ ಟಿಕೆಟ್ ಕೌಂಟರ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಧ್ವಂಸ ಗೊಳಿಸಿದ್ದಾರೆ. ಚನ್ನಮ್ಮ ವೃತ್ತದಲ್ಲಿ ದಲಿತ ಸಂಘಟನೆ ಕಾರ್ಯಕರ್ತರು ಟೈರ್ ಗೆ ಬೆಂಕಿ ಹಚ್ಚಿ ಹೋರಾಟ ಹೋರಾಟ ಕೈಗೊಂಡಿದ್ದಾರೆ.

RELATED ARTICLES  ತಾವು ಕುಡಿಯುವ ಹಾಲಿನ ಬಗ್ಗೆ ಯೋಚಿಸುವವರು ಗೋಮಾಂಸ ತಿನ್ನಲಾರರು

ದಲಿತ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನಿಕರು ಹಲವು ಗೊಂದಲಗಳನ್ನು ಅನುಭವಿಸುವಂತಾಗಿದೆ. ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ಇಲ್ಲದ ಕಾರಣ, ಸಾರ್ವಜನಿಕರು ಪರದಾಡುತ್ತಿದ್ದಾರೆ. ಅಲ್ಲದೇ, ಶಾಲಾ ಕಾಲೇಜುಗಳಿಗೆ ರಜೆ ನೀಡದ ಕಾರಣದಿಂದಲೂ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇನ್ನೂ ಪಿಯುಸಿ ಪ್ರಥಮ, ವಿಟಿಯು ಜೊತೆಗೆ ಕೆಲವು ತಾಂತ್ರಿಕ ವಿಭಾಗದ ಪರೀಕ್ಷೆಗಳಿಗೆ ತೆರಳುವ ವಿದ್ಯಾರ್ಥಿಗಳ ಪರಿಸ್ಥಿತಿಯಂತೂ ಹೇಳತೀರದಾಗಿದೆ.

RELATED ARTICLES  ನಾವು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ : ಮುಖ್ಯಮಂತ್ರಿ ಕುಮಾರಸ್ವಾಮಿ