ಕಾರವಾರ: ಯುವ ಮುಖಂಡ ಸಿದ್ದಾರ್ಥ ಮಾಧವ ನಾಯಕ ಅವರನ್ನು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ರಾಜ್ಯ ಘಟಕದ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ ಅವರು ಆದೇಶ ಹೊರಡಿಸಿದ್ದಾರೆ.

RELATED ARTICLES  ಸಿದ್ದರಾಮಯ್ಯ ಸರಕಾರದಿಂದ ಆಗಿರುವಷ್ಟು ಅಭಿವೃದ್ಧಿ ಮತ್ತೆ ಯಾರಿಂದಲೂ ಆಗಿಲ್ಲ: ದೇಶಪಾಂಡೆ

‘ರಾಜ್ಯಾದ್ಯಂತ ಸಂಘಟನೆ ಬಲಪಡಿಸಿ, ವಿದ್ಯಾರ್ಥಿಗಳ ಪರ ನ್ಯಾಯಕ್ಕಾಗಿ ಹೋರಾಟ ನಡೆಸಬೇಕು’ ಎಂದು ನೇಮಕಾತಿ ಪತ್ರದಲ್ಲಿ ಸೂಚನೆ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇತ್ತೀಚಿಗೆ ಅವರು ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿರು.

RELATED ARTICLES  ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಜಾಗ ಮಂಜೂರು.

ಯುವ ಕಾಂಗ್ರೆಸ್ ರಾಷ್ಟ್ರೀಯ ಘಟಕದ ಕಾರ್ಯದರ್ಶಿ ಬಿ.ವಿ.ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ ಹಾಗೂ ಉಪಾಧ್ಯಕ್ಷ ಚೇತನ್ ಗೌಡ ಉಪಸ್ಥಿತರಿದ್ದರು.