ಕುಮಟಾ: ತಾಲೂಕಿನ ದಿವಗಿಯ ಚೇತನ ಸೇವಾ ಸಂಸ್ಥೆ ಹಾಗೂ ವಿವಿಧ ಸ್ಥಳೀಯ ಸಂಘಟನೆಗಳ ಆಶ್ರಯದಲ್ಲಿ ಕೆಳಗಿನಕೇರಿಯ ಸ.ಕಿ.ಪ್ರಾ. ಶಾಲೆಯ ಆವರಣದಲ್ಲಿ ಚೇತನ-ಸಂಸ್ಕøತಿ-ಉತ್ಸವ ಎಂಬ ವಿಶೇಷ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರಾದ ದಿನಕರ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಚೇತನ ಸೇವಾ ಸಂಸ್ಥೆಯು ಸಾಂಸ್ಕøತಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯವನ್ನು ಮಾಡುತ್ತಿರುವುದರ ಜೊತೆಗೆ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿರುವ ಕೆಲಸ ಶ್ಲಾಘನೀಯ ಎಂದರು.

ಕ್ರೀಡಾಂಗಣವನ್ನು ಉದ್ಘಾಟಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆಯವರು ಮಾತನಾಡಿ ಒಂದು ಸಮಾಜ ಮುಂದುವರಿಯಬೇಕಾದರೆ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಮಾತ್ರವಲ್ಲದೇ ಸಾಂಸ್ಕøತಿಕವಾಗಿಯೂ ಸಹ ಮುಂದುವರಿದರೆ ಮಾತ್ರ ಪರಿಪೂರ್ಣರಾಗಲು ಸಾಧ್ಯ. ಪ್ರತಿಭೆಗಳನ್ನು ಪುರಸ್ಕರಿಸುವುದು, ಸಾಧಕರನ್ನು ಸನ್ಮಾನಿಸಿ ಗೌರವಿಸುವುದು ನಮ್ಮ ಸುಶಿಕ್ಷಿತ ಸಮಾಜದ ಆದ್ಯ ಕರ್ತವ್ಯವಾಗಿದೆ. ಈ ದಿಶೆಯಲ್ಲಿ ಚೇತನ ಸೇವಾ ಸಂಸ್ಥೆ ಅತ್ಯುತ್ತಮ ಕಾರ್ಯವನ್ನು ಮಾಡುತ್ತಿದೆ. ಮಹಿಳೆಯರಿಗಾಗಿಯೂ ಕೂಡಾ ಹಗ್ಗಜಗ್ಗಾಟದಂತಹ ಕಾರ್ಯಕ್ರಮವನ್ನು ಏರ್ಪಡಿಸಿ ಅವರನ್ನು ಕೂಡಾ ಹುರಿದುಂಬಿಸುವ ಕೆಲಸ ಮಾಡಿರುವುದು ಅತ್ಯಂತ ವಿಶೇಷವಾಗಿ ಅಭಿನಂದನಾರ್ಹವಾಗಿದೆ. ಸನ್ಮಾನ, ಪುರಸ್ಕಾರಗಳು ಸಾಧಕರನ್ನು ಪ್ರೋತ್ಸಾಹಿಸುವುದರೊಂದಿಗೆ ಇನ್ನೂ ಹೆಚ್ಚಿನ ಸಾಧನೆಗೈಯುವಂತೆ ಹುರಿದುಂಬಿಸುತ್ತವೆ. ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳು ಹೆಚ್ಚೆಚ್ಚು ಜರುಗಬೇಕು. ಸಾಂಸ್ಕøತಿಕ ಕಾರ್ಯಕ್ರಮಗಳು ಪರಸ್ಪರರಲ್ಲಿ ಸಾಮರಸ್ಯವನ್ನು ಮೂಡಿಸುತ್ತವೆ. ಹಾಗಾಗಿ ಪ್ರತಿಯೊಬ್ಬರೂ ಕೂಡಾ ಸಾಂಸ್ಕøತಿಕವಾಗಿ ಮುನ್ನಡೆಯುವ ಪ್ರಯತ್ನ ಮಾಡಬೇಕು ಎಂದರು.

RELATED ARTICLES  ಜಿಲ್ಲೆಯ ಎಂಟು ಸ್ಥಳೀಯ ಸಂಸ್ಥೆ ಚುನಾವಣೆ : ಪೋಲೀಸ್ ಬಿಗಿ ಬಂದೋ ಬಸ್ತ: ಶಾಂತಿಯುತ ಮಾತದಾನ

IMG 20180108 WA0031 1
ಸನ್ಮಾನಿತರಾಗಿ ಆಗಮಿಸಿದ ಪ್ರದೀಪ ನಾಯಕ ದೇವರಬಾವಿ ಅವರು ಮಾತನಾಡಿ ಇಂತಹ ಹಿಂದುಳಿದ ಪ್ರದೇಶದಲ್ಲಿ ಅತ್ತುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಎನ್ನುತ್ತ ಇತ್ತೀಚಿನ ದಿನಗಳಲ್ಲಿ ಕೋಮು ಸಾಮರಸ್ಯ ಕಡಿಮೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೂರಜನಾಯ್ಕ ಸೋನಿ ಅವರು ಮಾತನಾಡಿ ಇಂತಹ ಅತ್ಯದ್ಭುತ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಮಾಜಮುಖಿ ಕಾರ್ಯಕ್ಕೆ ಮುನ್ನುಡಿಯಾಗಿದೆ. ಕೋಮು ಸಾಮರಸ್ಯ ಕಡಿಮೆಯಾಗುತ್ತಿದೆ ಎಂದು ನುಡಿದ ಪ್ರದೀಪ ನಾಯಕ ಅವರ ಮಾತುಗಳನ್ನು ಉಲ್ಲೇಖಿಸುತ್ತಾ ಬಹುಸಂಖ್ಯಾತರಾದ ಹಿಂದೂಗಳಾದ ನಾವು ಮುಸ್ಲಿಮ್, ಕ್ರೈಸ್ತ, ಸಿಖ್, ಪಾರ್ಸಿ ಮೊದಲಾದ ಅಲ್ಪಸಂಖ್ಯಾತರೊಂದಿಗೆ ಸಾಮರಸ್ಯದಿಂದ ಬದುಕುವ ಉದ್ದೇಶ ನಮಗೂ ಹಾಗೂ ನಮ್ಮ ಪಕ್ಷಕ್ಕೂ ಇದೆ ಎನ್ನುತ್ತಾ ಪ್ರದೀಪ ನಾಯಕ ದೇವರಬಾವಿ ಅವರಿಗೆ ಸವಾಲು ಎಸೆಯುತ್ತಾ ನಾವು ನಮ್ಮ ಪಕ್ಷದ ಧ್ವಜ ಅಥವಾ ಹಿಂದೂ ಧ್ವಜ ಸ್ಥಾಪಿಸುವುದಿಲ್ಲ.ಆದರೆ ಕೆಲವು ಪ್ರದೇಶಗಳಲ್ಲಿ ರಾಷ್ಟ್ರಧ್ವಜ ಸ್ಥಾಪಿಸುತ್ತೇವೆ. ಇದಕ್ಕೆ ನೀವು ನಮ್ಮೊಂದಿಗೆ ಕೈ ಜೋಡಿಸಿ. ಆಗ ಮಾತ್ರ ಕೋಮು ಸೌಹಾರ್ದತೆ ಬಾಯಿಮಾತಿಗೆ ಸೀಮಿತವಾಗಿರದೇ ಕಾರ್ಯರೂಪಕ್ಕೆ ಬರುತ್ತದೆ. ಹಿಂದೂಗಳು ಬಹುಸಂಖ್ಯಾತರಾಗಿದ್ದರೂ ಸಾಮರಸ್ಯವನ್ನು ಬಯಸಿಯೇ ತಾಳ್ಮೆಯಿಂದ ವರ್ತಿಸುತ್ತಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದರೆ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

RELATED ARTICLES  ಸಂಸದರಿಂದಲೇ ಹಿಂಸಾಚಾರಕ್ಕೆ ಕುಮ್ಮಕ್ಕು; ಕುಮಾರಸ್ವಾಮಿ

ಈ ಕಾರ್ಯಕ್ರಮದಲ್ಲಿ ಜಿ. ಪಂ. ಸದಸ್ಯ ಗಜಾನನ ಪೈ, ಆರ್. ಎಚ್. ನಾಯ್ಕ, ಹೇಮ ತ ಗಾಂವಕರ, ಆರ್. ಕೆ. ಅಂಬಿಗ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮದ್ಯಪಾನ ತ್ಯಜಿಸಿದ 8 ಜನರನ್ನು ಮತ್ತು ಎಸ್. ಎಸ್. ಎಲ್. ಸಿ. ಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಗಳಿಸಿದವರನ್ನು ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.