ಕುಮಟಾ; ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಸಂಬಂಧ ಪದವಿಯನ್ನು ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಉಚಿತವಾಗಿ ಲ್ಯಾಪ್ ಟಾಪ್ ನೀಡುವ ಕಾರ್ಯ ಮಾಡುತ್ತಿದೆ. ಅದರಂತೆ ಕುಮಟಾ ತಾಲೂಕಿನ ಪದವಿ ಕಾಲೇಜಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾರದಾ ಮೋಹನ ಶೆಟ್ಟಿ ಪಾಲಗೊಂಡಿದ್ದರು.
ಕಾಲೇಜಿನಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಅವರು ಬಳಿಕ ಮಾತನಾಡಿದ ಶಾಸಕರು, ನಮ್ಮ ಸರಕಾರ ಶಿಕ್ಷಣಕ್ಕೆ ಪ್ರೋತ್ಸಹ ನೀಡುವ ಉದ್ದೇಶದಿಂದ ಒಂದು ಹೆಜ್ಜೆ ಮುಂದಿಟ್ಟಿದೆ. ಅದರಂತೆ ಮುಂದಿನ ದಿನದಲ್ಲಿ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದರು..
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿ,ಪಂಚಾಯತ ಸದಸ್ಯ ರತ್ನಾಕರ ನಾಯ್ಕ ಮಾತನಾಡಿ ಸರಕಾರ ವಿದ್ಯಾರ್ಥಿಗಳಿಗೆ ನೀಡಿರುವ ಲ್ಯಾಪ್ ಟಾಪ್ ಗಳನ್ನು ದುರ್ಬಳಕೆ ಮಾಡಿಕೊಳ್ಳದೆ, ಶಿಕ್ಷಣಕ್ಕೆ ಬೇಕಾದ ವಿಷಯಗಳನ್ನು ತಿಳಿದುಕೊಳ್ಳಬೇಕು, ಜೊತೆಗ ಕಾಲೇಜಿನ ಉಪನ್ಯಾಸಕರು ಕೂಡ ಸರಕಾರದ ಲ್ಯಾಪ್ ಟಾಪ್ ನೀಡಿದ ನಂತರದ ವಿದ್ಯಾರ್ಥಿಗಳ ಶಿಕ್ಷಣ ಚಟುವಟಿಕೆಯನ್ನು ಅರಿತು ಕೊಳ್ಳಬೇಕು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಗೀತಾ ವಾಲೇಕರ, ಗಣಪತಿ ಶೆಟ್ಟಿ ಇನ್ನಿತರರು ಇದ್ದರು.