ಕಾರವಾರ: ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಅಂತಿಮವಾಗಿ ಜೆಡಿಎಸ್ ಪಕ್ಷಕ್ಕೆ ಬರುವುದಾಗಿ ತಿಳಿಸಿದ್ದು, ಅವರು ಅಧಿಕೃತವಾಗಿ ಜ.15ರಂದು ಬೆಂಗಳೂರಿನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೆಗೌಡ, ಹಾಗೂ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪುರುಷೋತ್ತಮ ಸಾವಂತ ತಿಳಿಸಿದರು.

RELATED ARTICLES  ಯಕ್ಷಗುರು ಉಮೇಶ ಭಟ್ಟ ಅವರಿಗೆ ಶಿಷ್ಯರಿಂದ ಗುರುವಂದನೆ

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಆನಂದ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ನಿಲ್ಲುವ ಮೂಲಕ ಅವರು ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿಯೂ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆನಂದ್ ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.

RELATED ARTICLES  ಸಂಕಲ್ಪ ಮಾತ್ರದಿಂದ ಕಾರ್ಯಸಿದ್ಧಿ-ಡಾ.ಜಿ.ಜಿ.ಹೆಗಡೆ

ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಜಿತ್ ಪೊಕಳೆ, ಖಲೀಲುಲ್ಲಾ, ಸಂತೋಷ ಸಾವಂತ ಹಾಜರಿದ್ದರು.