ನವದೆಹಲಿ: ‘ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಎರಡನೇ ಅವಧಿಗೆ ಆಡಳಿತ ಚುಕ್ಕಾಣಿ ಹಿಡಿಯುವ ಭರವಸೆ ಹೊಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹಾಗೂ ಇತರೆ ಪ್ರಮುಖರೊಡನೆ ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಜತೆಗಿನ ಭೇಟಿ ಬಳಿಕ ಮಾದ್ಯಮದವರೊಡನೆ ಮಾತನಾಡಿದರು.

ರಾಜ್ಯದಲ್ಲಿ ಪಕ್ಷದ ಪ್ರಗತಿಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷರು ಸಂತಸ ವ್ಯಕ್ತಪಡಿಸಿದ್ದಾರೆ, 2013 ರಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಸರ್ಕಾರವು ಯಶಸ್ವಿಯಾಗಿ ಪೂರೈಸಿದೆ. ಎಂದ ಸಿದ್ದರಾಮಯ್ಯ “ನಮ್ಮ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆಯಿಲ್ಲ ಎಂದು ತಿಳಿಯಲು ರಾಹುಲ್ ಗಾಂಧಿ ತುಂಬಾ ಸಂತಸ ಹೊಂದಿದರು. ನಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿರುವ ಎಲ್ಲ ಭರವಸೆಗಳನ್ನು ಸರ್ಕಾರ ಪೂರೈಸಿದೆ . ಕರ್ನಾಟಕದಲ್ಲಿ ಇನ್ನೊಂದು ಅವಧಿಗೂ ಸಂಪೂರ್ಣ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ” ಎಂದರು.

RELATED ARTICLES  ವಿದ್ಯಾರ್ಥಿಗಳೇ ಗಮನಿಸಿ..: SSLC ಪ್ರಶ್ನೆ ಪತ್ರಿಕೆಯಲ್ಲಿ ಬಹುಮುಖ್ಯ ಬದಲಾವಣೆ..!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಡಿದ್ದ ಟೀಕೆಗೆ ಪ್ರತಿಕ್ರಯಿಸಿದ್ದ ಮುಖ್ಯಮಂತ್ರಿ “ಬಿಜೆಪಿಯು ಕರ್ನಾಟಕದಲ್ಲಿ ಅಪ್ರಸ್ತುತ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ಹಿಂದುತ್ವವು ಅವರಿಗೆ ಇರುವ ಏಕೈಕ ಅಜೆಂಡಾವಾಗಿದೆ. ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಷಾ ಇದೇ ವಿಚಾರಗಳನ್ನು ಮಾತನಾಡುತ್ತಾರೆ. ಭವಿಷ್ಯದಲ್ಲಿ ಮೋದಿ ಸರ್ಕಾರವೂ ಹಿಂದುತ್ವವನ್ನೇ ಮುಖ್ಯ ವಿಷಯವಾಗಿಸಿಕೊಳ್ಳುತ್ತದೆ” ಎಂದರು.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 09-04-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

ಕರ್ನಾಟಕ ವಿಧಾನಸಭೆಗೆ ಈ ವರ್ಷ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದರು. ಸರಿ ಸುಮಾರು ಮೂರು ತಾಸು ನಡೆದ ಸಭೆಯಲ್ಲಿ ರಾಹುಲ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಾರ್ಯತಂತ್ರ, ಪಕ್ಷದ ಬಲವರ್ಧನೆ ನೀತಿಗಳ ಕುರಿತು ಚರ್ಚಿಸಿದ್ದಾರೆ.

ಕರ್ನಾಟಕ ವಿಧಾನ ಸ್ಭೆ ಚುನಾವಣೆ ಈ ವರ್ಷ ಏಪ್ರಿಲ್-ಮೇ ನಲ್ಲಿ ನಡೆಯಲಿದ್ದು ಫೆಬ್ರವರಿ 10-12 ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.