ಭೋಪಾಲ್: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನೂರಾರು ಶಾಲಾ ಶಿಕ್ಷಕಿಯರು ಸಾಮೂಹಿಕವಾಗಿ ತಲೆ ಬೋಳಿಸಿಕೊಂಡು ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ಕೈಗೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಅಧ್ಯಾಪಕ್ ಅಧಿಕಾರ್ ಯಾತ್ರಾ ಮೂಲಕ ನೂರಾರು ಶಿಕ್ಷಕರು ಮತ್ತು ಶಿಕ್ಷಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಸಮಾನ ವೇತನ, ಸಮಾನ ಕೆಲಸ ಮತ್ತು ವರ್ಗಾವಣೆ ನೀತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡಿದ್ದಾರೆ.

RELATED ARTICLES  ರಾಜ್ಯ ಬಜೆಟ್ ಕೃಷಿಗೆ ಸಿಂಹಪಾಲು! ಉಳಿದಂತೆ ಏನೇನು ಗೊತ್ತಾ? ಇಲ್ಲಿದೆ ಮಾಹಿತಿ.

ಶಿಕ್ಷಕರು ಮತ್ತು ಶಿಕ್ಷಕಿಯರು ಪ್ರತಿಭಟನೆಯನ್ನೂ ತೀವ್ರಗೊಳಿಸಿದ್ದು ಪ್ರತಿಭಟನಾನಿರತ ಸ್ಥಳದಲ್ಲೇ ತಲೆ ಬೋಳಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಮುಂದಿನ ದಿನಗಳಲ್ಲಿ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಶಿಕ್ಷಕರ ಸಂಘಟನೆ ಎಚ್ಚರಿಕೆ ನೀಡಿದೆ.

RELATED ARTICLES  ಪರಿಸರಕ್ಕೆ ಕಡಿಮೆ ಪ್ರಮಾಣದಲ್ಲಿ ಹಾನಿ ಉಂಟುಮಾಡುವ, ಸುಡುಮದ್ದುಗಳ ಮಾರಾಟಕ್ಕೆ ಮಾತ್ರ ಅವಕಾಶ:ಸುಪ್ರೀಂ ಕೋರ್ಟ್ ಅನುಮತಿ.