ಬೆಂಗಳೂರು: ಹಿಂದುತ್ವ ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಗೆ ಪ್ರಚಾರಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿದೆ.

ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ತಾವು ಹಿಂದೂ ಎಂದು ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ನಾವು ಕೂಡ ಮೂಹೂರ್ತದ ಪ್ರಕಾರವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ಶೀಘ್ರದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತವನ್ನು ನಿಗದಿ ಮಾಡಿ, ಪಟ್ಟಿ ಬಿಡುಗಡೆ ಮಾಡಿ ನಾವೂ ಕೂಡ ಹಿಂದೂಗಳೇ ಎಂದು ತೋರಿಸುತ್ತೇವೆಂದು ಹೇಳಿದ್ದಾರೆ.

RELATED ARTICLES  ಗೋಕರ್ಣ ದೇಗುಲ ನಮಗೆ ಸೇವೆಯ ಸಾಧನವಷ್ಟೇ: ರಾಘವೇಶ್ವರ ಶ್ರೀ

ಇದೇ ವೇಳೆ ಮಹಾದಾಯಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಹಾದಾಯಿ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಅವರು ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡಲೇ ವಿವಾದವನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

RELATED ARTICLES  ಕರ್ನಾಟಕದಲ್ಲಿ ಕೊರೋನಾ ಆರ್ಭಟ : ಒಂದೇ ದಿನ 48 ಸಾವಿರಕ್ಕೂ ಹೆಚ್ಚು ಪ್ರಕರಣ