ಅಂಕೋಲಾ: ಟೈರ್ ರಿಮೋಡ್ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುತ್ತಲೂ ಬೆಂಕಿ ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ನಷ್ಟವಾದ ಘಟನೆ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡ ಕಾತ್ಯಾಯನಿ ಟೈರ್ ರಿಮೋಡ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಒಳಗಡೆ ಇದ್ದ ಲಕ್ಷಾಂತರ ಮೌಲ್ಯದ ಮಷೀನರಿಗಳು ಹಾಗು ಟೈರ್ ಗಳು ಹೊತ್ತು ಉರಿದು ಸುಟ್ಟು ಕರಕಲಾಗಿದೆ. ಕಾರ್ಮಿಕರು ಹೊರಗಡೆ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.

RELATED ARTICLES  ರಾಮತೀರ್ಥ ಉಳಿಸಿ ಸಮಾಲೋಚನಾ ಸಭೆ : ಹಲವು ವಿಚಾರ ಚರ್ಚೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳಿಯರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಹರಸಾಹಸ ಪಟ್ಟರು. ಬೆಂಕಿಯ ಜ್ವಾಲೆ ತೀವ್ರತೆ ಪಡೆಯುತ್ತಿದ್ದಂತೆ ಹತ್ತಿರದಲ್ಲಿದ್ದ ಸ್ಥಳೀಯರು ಕೂಡಾ ಕಂಗಾಲಾಗಿದ್ದಾರೆ. ವಿಷಯ ತಿಳಿದ ಅಂಕೋಲಾ ಪೋಲಿಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES  ಯಲ್ಲಾಪುರ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ