ಹಳಿಯಾಳ : ಆಸ್ಪತ್ರೆಯಲ್ಲಿ ಹೆರಿಗೆ ಸಮಯದಲ್ಲಿ ಸಮರ್ಪಕ ಚಿಕಿತ್ಸೆ ನೀಡದ ಹಿನ್ನಲೆಯಲ್ಲಿ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಆಯೇಷಾ ಗೌಸ್ ಅಕ್ತರ್(32) ಮೃತ ಮಹಿಳೆ. ಇವರನ್ನು ಹೆರಿಗಾಗಿ ಇತ್ತೀಚೆಗೆ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಈ ಸಂದರ್ಭದಲ್ಲಿ ಹೆರಿಗೆ ಮಾಡಿಸುವಾಗ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರಿಂದಾಗಿ ಮಹಿಳೆಯ ದೇಹದಿಂದ ರಕ್ತಸ್ರಾವವಾಗಿತ್ತು. ಇದಲ್ಲದೇ ಹೆರಿಗೆ ಸಂದರ್ಭದಲ್ಲಿ ವೈದ್ಯರು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

RELATED ARTICLES  ನ.29 ಕ್ಕೆ ಕುಳ್ಳೆ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ

ಒಟ್ಟಿನಲ್ಲಿ ಸಮರ್ಪಕ ಚಿಕಿತ್ಸೆ ನೀಡದ ಹಿನ್ನಲೆಯಲ್ಲಿ ಅಲ್ಲಿಂದ ಹುಬ್ಬಳ್ಳಿಯ ಕಿಮ್ಸ್ ಗೆ ಕರೆತರಲಾಗಿದ್ದು, ಇಲ್ಲಿ ಮಗುವನ್ನು ಮಾತ್ರ ರಕ್ಷಣೆ ಮಾಡಲಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಶವವನ್ನು ತಂದು ನ್ಯಾಯಕ್ಕಾಗಿ ಆಹೋರಾತ್ರಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

RELATED ARTICLES  ಭಟ್ಕಳ ಮೂಲದ 22 ವರ್ಷದ ಯುವಕ ಕರೋನಾ ವೈರಸನಿಂದ ಗುಣಮುಖ : ನಾಳೆ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಘಟನೆ ಸಂಬಂಧ ಹಳಿಯಾಳ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.