ಬೆಂಗಳೂರು: ಕನ್ನಡದ ಹಿರಿಯ ನಟ ಕಾಶಿನಾಥ್ ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎನ್ನಲಾಗಿದ್ದು ಕಳೆದ ಎರಡು ದಿವಸದ ಹಿಂದೆ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ ಎನ್ನಲಾಗಿದೆ.

ಶೀನಾಥ್ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ. ಇವರು ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಇವರು ಉಪೇಂದ್ರ, ಮನೋಹರ್, ಸುನೀಲ್‍ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

RELATED ARTICLES  ರೈತರ ಹಿತಾಸಕ್ತಿ ರಕ್ಷಣೆಗೆ ತಮ್ಮ ಸರ್ಕಾರ ಸಂಪೂರ್ಣ ಬದ್ಧ : ನರೇಂದ್ರ ಮೋದಿ

ಕಾಶೀನಾಥ್ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೆಬ್ಬಿಸಿದವರು. ಅವರು ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ತಮ್ಮ ಕೈಚಳಕ ತೋರಿಸಿದ್ದಾರೆ. ಅವರ ವಿಭಿನ್ನ ಶೈಲಿಯ ಚಿತ್ರಗಳು ಯಶಸ್ಸಿನ ಉತ್ತುಂಗಕ್ಕೇರಿ ಗಲ್ಲಾಪೆಟ್ಟಿಗೆಯನ್ನು ಸೂರೆ ಹೊಡೆದವು. ಅವರ ಗರಡಿಯಲ್ಲಿ ಪಳಗಿದ ಅನೇಕ ಯುವಕರು ಇಂದು ಚಿತ್ರರಂಗದಲ್ಲಿ ಬಹಳ ಯಶಸ್ವಿಯಾಗಿದ್ದಾರೆ.

RELATED ARTICLES  ಗೋಕಳ್ಳತನ ಹಾಗೂ ಅಪರಾಧಿಗಳನ್ನು ಶಿಕ್ಷಿಸದ ಸರ್ಕಾರದ ಕ್ರಮವನ್ನು ಖಂಡಿಸಿದ 'ಗೋಪರಿವಾರ'

ಅವರ ಚಿತ್ರಗಳಲ್ಲಿ ಪ್ರಮುಖವಾದವು ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು ಇತ್ಯಾದಿ, ಅವರ ಮಂಗಳೂರು ಮಂಜುನಾಥ ಚಿತ್ರದ ಸಂಭಾಷಣೆಗಳು ಬಹಳ ಜನಪ್ರಿಯವಾಗಿವೆ.

ಇವರ ಅಜಗಜಾಂತರ(1991) ಎಂಬ ಚಿತ್ರವನ್ನು ಹಿಂದಿಯಲ್ಲಿ ಜುದಾಯಿ (1997) ಎಂದು ರೀಮೇಕ್ ಮಾಡಲಾಗಿದೆ. ಇದರಲ್ಲಿ ಅನಿಲ್ ಕಪೂರ್, ಶ್ರೀದೇವಿ ಹಾಗೂ ಊರ್ಮಿಳಾ ಮಾತೋಂಡ್ಕರ್ ಅಭಿನಯಿಸಿದ್ದಾರೆ.ಇವರು ಕಡಿಮೆ ವೆಚ್ಛದಲ್ಲಿ ಉತ್ತಮ ಚಿತ್ರಗಳನ್ನು ನಿರ್ಮಿಸುವಲ್ಲಿ ಸಿದ್ಧಹಸ್ತರಾಗಿದ್ದರು.