ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಂಡಳಿಯು ಒಟ್ಟು 29 ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಗುರುವಾರ ನಿರ್ಧರಿಸಿದ್ದು, ಮುಖ್ಯವಾಗಿ ಕರಕುಶಲ ವಸ್ತುಗಳಿಗೆ ಶೇ. ಶೂನ್ಯ ತೆರಿಗೆ ವ್ಯಾಪ್ತಿಗೆ ತರಲಾಗಿದೆ ಎಂದು ಉತ್ತರಾಖಂಡ್ ಹಣಕಾಸು ಸಚಿವ ಪ್ರಕಾಶ್ ಪಂತ್ ಅವರು ತಿಳಿಸಿದ್ದಾರೆ.

ಜಿಎಸ್ ಟಿ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಂತ್ ಅವರು, ಇಂದು ನಡೆದ 25ನೇ ಸಭೆಯಲ್ಲಿ 29 ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಜಿಎಸ್ ಟಿ ರಿಟರ್ನ್ ಸರಳಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದರು.

RELATED ARTICLES  ತಯಾರಾಗುತ್ತಿವೆ ಜೀವಕಳೆ ತುಂಬುವ ಸಿಮೆಂಟ್ ಶಿಲ್ಪ ಕಲಾಕೃತಿಗಳು!

10 ದಿನಗಳ ನಂತರ ಜಿಎಸ್ ಟಿ ಮಂಡಳಿ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಮತ್ತೊಂದು ಸಭೆ ನಡೆಸುತ್ತಿದ್ದು, ಈ ವೇಳೆ ಜಿಎಸ್ ಟಿ ರಿಟರ್ನ್ ಸರಳಗೊಳಿಸುವ ಕುರಿತು ಚರ್ಚಿಸಲಾಗುವುದು ಎಂದು ಪಂತ್ ತಿಳಿಸಿದ್ದಾರೆ. ಅಲ್ಲದೆ ಇತರೆ 49 ವಸ್ತುಗಳ ಮೇಲಿನ ಜಿಎಸ್ ಟಿ ಕಡಿತಗೊಳಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.

RELATED ARTICLES  ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ನಿಷ್ಕ್ರಿಯತೆ ತೋರಿದ ಮತಗಟ್ಟೆಗಳಲ್ಲಿ ಪಕ್ಷ ಸದೃಢಗೊಳಿಸಲು ಕ್ರಮ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ.

ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕೂ ಮುನ್ನ ನಡೆದ ಮಹತ್ವದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.