ಬಳ್ಳಾರಿ : ಸಂವಿಧಾನ ಬದಲಾವಣೆಗಾಗಿಯೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಸಾಕಷ್ಟು ಪ್ರತಿಭಟನೆಗಳು ನಡೆಯುತ್ತಿದೆ.
ಇದರ ಬೆನ್ನಲ್ಲೇ ಬೆಳ್ಳಾರಿಯಲ್ಲಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ತೆರಳುವಾಗ ದಲಿತ ಸಂಘಟನೆಯ ನೂರಾರು ಕಾರ್ಯಕರ್ತರು ಸಚಿವ ಅನಂತ ಕುಮಾರ್ ಹೆಗಡೆಯವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜನಪ್ರತಿನಿಧಿಯಾಗಿ ಇದೇ ಮೊದಲ ಭಾರಿ ಸಂವಿಧಾನ ಬದಲಾಯಿಸುತ್ತೇನೆ ಎಂದು ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡುವ ಮೂಲಕ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದೆ. ಸಂವಿಧಾನ ಯಾರ ಒಬ್ಬರ ಆಸ್ತಿಯಲ್ಲ. ಇಡೀ ವಿಶ್ವವೇ ಭಾರತ ಸಂವಿಧಾನದ ಮಾರ್ಗದಲ್ಲಿ ಸರ್ಕಾರಗಳನ್ನು ನಡೆಸುತ್ತಿವೆ. ಇಂತಹ ಪವಿತ್ರ ಸಂವಿಧಾನದ ಬಗ್ಗೆ ಹೇಳಿಕೆ ನೀಡಲು ನಾಚಿಕೆಯಾಗಬೇಕು ಎಂದು ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹೆಗಡೆಯವರ ಕಾರು ಕಾರ್ಯಕ್ರಮದ ಸ್ಥಳದಿಂದ ಹೊರ ಬಂದಾಕ್ಷಣ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಬಳ್ಳಾರಿ ಐಬಿ ಎದುರು ಪ್ರತಿಭಟನೆ ನಡೆಸಿದರು. ಸಂಸದ ಶ್ರೀರಾಮುಲು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತ ಗೊಳಿಸಲು ಉತ್ನಿಸಿದರೂ ದಲಿತ ಸಂಘಟನೆಗಳು ಸಂಧಾನಕ್ಕೆ ಸಿದ್ಧವಿರಲಿಲ್ಲ.