IF

ಇತ್ತಿಚೆಗೆ ನಮ್ಮ ಆಹಾರದ ಪದ್ಧತಿಗಳು ಬದಲಾದಂತೆ, ನಾವು ಊಟಮಾಡುವ ತಟ್ಟೆಯಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಇಲ್ಲವಾಗಿವೆ ಅದರಂತೆ, ಡೈನಿಂಗ್ ಟೇಬಲ್ ಮೇಲೆ ಕುಂತು ಸ್ಫೂನ್ಸು, ಫೋರ್ಕ್ಸ್ ಬಂದು ಕೈಯಲ್ಲಿ ಭೋಜನ ಸವಿಯುವವರನ್ನು ಅನಾಗರೀಕರ ತರಹ ನೋಡುವ ಕಾಲ ಇದಾಗಿದೆ ಹಾಗಾಗಿ ಕೈಯಲ್ಲಿ ಊಟಮಾಡಿದರೆ ಏನೆಲ್ಲಾ ಲಾಭ ಅಂದ್ರೆ.?

ಕೈಯಲ್ಲಿ ಆಹಾರ ತಿನ್ನಿವುದರಿಂದ ಆಗುವ ಪ್ರಯೋಜನಗಳು: ( As Per Science).. ಕೈ ಸ್ಪರ್ಶದಿಂದ ದೇಹದಲ್ಲಿ ಶಕ್ತಿ ಸಂಚಯವಾಗುತ್ತದೆ.

ಕೈಯಲ್ಲಿ ಆಹಾರ ತಿನ್ನುವುದರಿಂದ ಕೆಲವು ಮಿಲಿಯನ್ ನರಗಳು ನಮ್ಮ ಮಿದುಳಿಗೆ ಸಂಕೇತ ಕಳುಹಿಸುತ್ತವಂತೆ.

ಆಹಾರವನ್ನು ಕೈಯಲ್ಲಿ ಸ್ಪರ್ಶಿಸುತ್ತಿದ್ದಂತೆ, ಆಹಾರ ತೆಗೆದುಕೊಳ್ಳುವ ವಿಷಯ ಮಿದುಳು ಉದರಕ್ಕೆ ಸಂಕೇತ ರವಾನಿಸುತ್ತದೆ. ಆಗ ಹೊಟ್ಟೆಯಲ್ಲಿ ಜೀರ್ಣ ರಸಗಳು, ಎಂಜೈಮ್‌ಗಳು ಬಿಡುಗಡೆಯಾಗಿ ಜೀರ್ಣಕ್ರಿಯೆ ಸುಗಮವಾಗಿ ಆಗುತ್ತದೆ.

ಕೈಯಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಆರೋಗ್ಯವಾಗಿರುವುದಷ್ಟೇ ಅಲ್ಲದೆ, ಯಾವುದೇ ಆಲೋಚನೆಗಳು ಬರದೆ ಒಂದೇ ಆಲೋಚನೆಯಲ್ಲಿ ಇರುತ್ತೇವೆ.ನಮ್ಮ ಆಹಾರದಲ್ಲಿ ಎಣ್ಣೆಯನ್ನು ಹೆಚ್ಚಾಗಿ ಬಳಸುತ್ತೇವೆ. ಹೀಗೆ ತಯಾರಿಸಿದ ಆಹಾರವನ್ನು ಸ್ಫೂನ್ಸ್, ಫೋರ್ಕ್ಸ್‌ನಿಂದ ತಿನ್ನುವುದರಿಂದ ಪ್ರತಿಕ್ರಿಯೆ ಏರ್ಪಟ್ಟು ರುಚಿ ಕೆಡುತ್ತದೆ.ಕೈ ಬೆರಳಲ್ಲಿ ಆಹಾರವನ್ನು ಕಲೆಸಿಕೊಂಡು, ಒಂದೊಂದೇ ತುತ್ತು ತಿನ್ನುವುದರಿಂದ ರಕ್ತಸಂಚಾರ ಚೆನ್ನಾಗಿ ಆಗುತ್ತದೆ.ಕೈಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ, ಬೆರಳು ತುಟಿಗೆ ತಾಗುತ್ತಿದ್ದಂತೆ ಬಾಯಲ್ಲಿ ಲಾಲಾರಸ ಉತ್ಪನ್ನವಾಗುತ್ತದೆ.

ಇನ್ನು ಕೈ ಬೆರಳಲ್ಲಿ ಆಹಾರ ತೆಗೆದುಕೊಳ್ಳುವುದರಿಂದ ಅನಾರೋಗ್ಯ ಪಾಲಾಗದೆ, ಆರೋಗ್ಯವಾಗಿರುತ್ತೇವೆ. ಜೀರ್ಣ ಪ್ರಕ್ರಿಯೆ ಚೆನ್ನಾಗಿ ನಡೆಯುತ್ತದೆ. ಇದು ಒಂದು ರೀತಿ ವ್ಯಾಯಾಮದಂತಿರುತ್ತದೆ.

* ಕೈಯಲ್ಲಿರುವ ಒಂದೊಂದು ಬೆರಳು ಒಂದೊಂದು ತತ್ವವನ್ನು ಹೊಂದಿರುತ್ತವೆ.

* ಹೆಬ್ಬೆರಳು: ಅಗ್ನಿತತ್ವ

* ತೋರು ಬೆರಳು: ವಾಯುತತ್ವ

* ಮಧ್ಯ ಬೆರಳು: ಆಕಾಶ

* ಉಂಗುರ ಬೆರಳು: ಭೂಮಿ

* ಕಿರುಬೆರಳು: ಜಲತತ್ವ

ಈ ಐದು ಬೆರಳುಗಳ ಸ್ಪರ್ಶ ಆಹಾರಕ್ಕೆ ತಾಕಿದಾಗ ಜೀವಶಕ್ತಿ ಉತ್ತೇಜನಗೊಳ್ಳುತ್ತದೆ.

ಹಾಗದರೆ ಇನ್ನೇಕೆ ತಡ ಡೈನಿಂಗ್ ಟೇಬಲ್ ಬಿಟ್ಟು ಮಟ್ಟಸವಾಗಿ ಚಕ್ಕಳ ಮಕ್ಕಳಹಾಕಿಕೊಂಡು ಕೈ ತುತ್ತು ತಿನ್ನಿ ಆಗ ನಿಮಗೆ ಆಗುವ ಅನುಭವ ಬೇರೆ.?