ಹೊನ್ನಾವರ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ
ದಿ: ಶ್ರೀ ಮೋಹನ್ ಕೆ. ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜು ಹೊನ್ನಾವರ(ಉ.ಕ.) ಇವರ ಆಶ್ರಯದಲ್ಲಿ ಹೊನ್ನಾವರದಲ್ಲಿ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು
ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಇವರು ಮಕ್ಕಳ ಪ್ರತಿಭೆ ಅನಾವರಣ ಗೊಳಿಸಲು ಹಾಗೂ ಮಕ್ಕಳಿಗೆ ಪ್ರೋತ್ಸಾಹ ನೀಡಲು ಇಂತಹ ಕಾರ್ಯಕ್ರಮಗಳ ಅಗತ್ಯತೆ ಇದೆ. ಮಕ್ಕಳು ಶಿಕ್ಷಣದ ಜೊತೆಗೆ ಪ್ರತಿಭಾ ಪ್ರದರ್ಶನದಲ್ಲಿ ತೊಡಗಿಕೊಳ್ಳಬೇಕು ಎಂದರು.ಪ್ರತಿಭಾವಂತ ವಿದ್ಯಾರ್ಥಿಗಳೇ ದೇಶದ ಆಸ್ತಿ ಎಂದು ಅವರು ಅಭಿಪ್ರಾಯಪಟ್ಟರು.
ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು ಪುರಸ್ಕರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.