ಬಯಲು ಸೀಮೆ ಮತ್ತು ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಜೂ.12ರಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಆದರೆ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಕನ್ನಡ ಒಕ್ಕೂಟ ಕರೆ ನೀಡಿರುವ ರಾಜ್ಯ ಬಂದ್ ಗೆ ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ಕೆಎಸ್ ಆರ್ ಟಿಸಿ, ಬಿಎಂಟಿಸಿ, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳೇ ಬೆಂಬಲ ನೀಡಲು ನಿರಾಕರಿಸಿವೆ. ಹೀಗಾಗಿ ಸೋಮವಾರ ಬಂದ್ ಇದೆಯೋ ಇಲ್ಲವೋ ಎಂಬ ಗೊಂದಲ ಹುಟ್ಟಿಕೊಂಡಿದೆ.
RELATED ARTICLES  ‘ರಾಜಕೀಯ ಕಾರಣಕ್ಕಾಗಿ ಹಿಂದುತ್ವ ಬಳಕೆ’ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಕಿಡಿ.