ಶ್ರೀ ಮಹಾಸತಿ ಕ್ರೀಡಾಬಳಗ ಹರೀಟಾ ಇವರ ಆಶ್ರಯದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು 26/01/2018 ರಂದು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಅಳಕೋಡ ಗ್ರಾಮ ಪಂಚಾಯತದ ಅಧ್ಯಕ್ಷರಾದ ಕೃಷ್ಣಾನಂದ ವೆರ್ಣೇಕರ ಅವರು ಉದ್ಘಾಟಿಸಿ ಎಲ್ಲಾ ತಂಡಗಳಿಗೆ ಶುಭ ಹಾರೈಸಿದರು.
ಅಂಕಣ ಉದ್ಘಾಟಿಸಿದ ಸದಸ್ಯರಾದ ಪ್ರದೀಪ ನಾಯಕ ದೇವರಬಾವಿ ಅವರು ಮಾತನಾಡಿ ಹಿಂದುಳಿದ ಇಂತಹ ಭಾಗಗಳಲ್ಲಿ ಉತ್ತಮ ಸಂಘಟನೆಯೊಂದಿಗೆ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಶುಭ ಕೋರಿದರು.
ಟ್ರೋಫಿ ಅನಾವರಣಗೊಳಿಸಿದ ಮಾಜಿ ಶಾಸಕ ದಿನಕರ ಶೆಟ್ಟಿಯವರು ಮಾತನಾಡಿ ಕ್ರೀಡೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾ ಕಾರ್ಯಕ್ರಮಗಳು ಹೆಚ್ಚೆಚ್ಚು ಜರುಗಬೇಕು ಎಂದರು.
ಪಂದ್ಯಾವಳಿಗೆ ಚಾಲನೆ ನೀಡಿದ ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆಯವರು ಮಾತನಾಡಿ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಕಾರ್ಯಕ್ರಮಗಳು ಜರುಗಿದಾಗ ನಮ್ಮ ಸ್ಥಳೀಯ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಹಾಗೂ ಅವರ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಮಹತ್ವ ನೀಡದೆ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸಿ ಪರಿಪೂರ್ಣರಾಗಬೇಕು. ಪ್ರತಿಭೆಗಳನ್ನು ಗುರುತಿಸಿ ಪುರಸ್ಕರಿಸುವುದು ಸುಸಂಸ್ಕøತ ಸಮಾಜದ ಆದ್ಯ ಕರ್ತವ್ಯವಾಗಿದೆ. ಮುಂದಿನ ದಿನಗಳಲ್ಲಿ ಶ್ರೀ ಮಹಾಸತಿ ಕ್ರೀಡಾಬಳಗದ ವತಿಯಿಂದ ಇಂತಹ ಕಾರ್ಯಕ್ರಮಗಳು ಕೂಡಾ ಜರುಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸೂರಜ ನಾಯ್ಕ ಸೋನಿಯವರು ಮಾತನಾಡಿ ಇಂತಹ ಕ್ರೀಡಾ ಕಾರ್ಯಕ್ರಮಗಳು ಹೆಚ್ಚೆಚ್ಚು ಜರುಗಲಿ ಇಂತಹ ಕಾರ್ಯಕ್ರಮಗಳಿಗೆ ಸದಾ ಸಹಕರಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರುಗಳಾದ ಗಜಾನನ ಪೈ, ಗಾಯತ್ರಿ ಗೌಡ, ರತ್ನಾಕರ ನಾಯ್ಕ, ಮಾಜಿ ತಾಲೂಕ ಪಂಚಾಯತದ ಅಧ್ಯಕ್ಷರಾದ ಫ್ರಾನ್ಸಿಸ್ ಫರ್ನಾಂಡಿಸ್, ಉದ್ಯಮಿ ಚಂದ್ರಹಾಸ ನಾಯಕ, ಬಹುಮಾನ ವಿತರಕರಾದ ಉದ್ದಿಮೆದಾರ ಮಾರುತಿ ಹೊನ್ನಪ್ಪ ನಾಯ್ಕ, ಸಂತೋಷ ಭಟ್ಟ, ದೀಪಕ ಎಂ. ನಾಯ್ಕ ಮುಂತಾದವರು ಉಪಸ್ಥಿತರಿದ್ದರು.