ದಾಂಡೇಲಿ: ಕರ್ನಾಟಕ ಸರಕಾರದ ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ರಚಿಸಲ್ಪಟ್ಟ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾಗಿ ದಾಂಡೇಲಿಯ ಪತ್ರಕರ್ತ, ಲೇಖಕ ಬಿ.ಎನ್. ವಾಸರೆ ನೇಮಕಗೊಂಡಿದ್ದಾರೆ.

ರಾಜ್ಯಪಾಲರ ಮತ್ತು ಸರಕಾರದ ಆದೇಶದನುಸಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳ ಸಮ್ಮತಿಯೊಂದಿಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳು ಈ ನೇಮಕಾತಿ ಆದೇಶ ಹೊರಡಿಸಿದ್ದು, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಹಾಗೂ ಸರಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ರಾಜ್ಯದ 15 ಜಿಲ್ಲೆಗಳಲ್ಲಿ ಈ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES  ಡೆತ್ ನೋಟ್ ಬರೆದಿಟ್ಟು ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ.

ಬಿ.ಎನ್. ವಾಸರೆಯವರು ಎರಡು ಅವಧಿಗೆ ಹಳಿಯಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದವರಾಗಿದ್ದು, ಇದೀಗ ಒಡನಾಡಿ ಹಾಗೂ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ, ಕವಿ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಸಕ್ರೀಯ ಕನ್ನಡ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರಾಗಿದ್ದಾರೆ. ಇವರನ್ನು ಕನ್ನಡ ಜಾಗೃತ ಸಮಿತಿಗೆ ನೇಮಕ ಮಾಡಿದ್ದಕ್ಕೆ ಹಲವರು ಅಭಿನಂದಿಸಿದ್ದಾರೆ.

RELATED ARTICLES  ಹೆಚ್ಚುತ್ತಿದೆ ಬೀದಿನಾಯಿಗಳ ಹಾವಳಿ : ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ.

ಜಿಲ್ಲೆಯಿಂದ ನಾಲ್ವರು ಸದಸ್ಯರ ನೇಮಕವಾಗಿದ್ದು ಬಿ.ಎನ್. ವಾಸರೆಯವರ ಜೊತೆ ಸಿದ್ದಾಪುರದ ಉಪನ್ಯಾಸಕ ಡಾ. ವಿಠ್ಠಲ ಭಂಡಾರಿ, ಕಾರವಾರದ ಪತ್ರಕರ್ತ ಟಿ.ಬಿ. ಹರಿಕಾಂತ, ಲೇಖಕಿ ಶ್ರೀದೇವಿ ಕೆರೆಮನೆ ನೇಮಕಗೊಂಡಿದ್ದಾರೆ.

ಈ ಸಮಿತಿಗೆ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದಿಂದ ನೇಮಿಸಲ್ಪಟ್ಟ ಸದಸ್ಯರ ಜೊತೆಗೆ ಜಿ.ಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕಸಾಪ ಜಿಲ್ಲಾಧ್ಯಕ್ಷರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕರು ಸದಸ್ಯರಾಗಿರುತ್ತಾರೆ.