ಗೋಕರ್ಣ : ಪ ಪೂ ಶ್ರೀ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳು , ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ , ಹರಿಹರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” 389ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್

ಶ್ರೀ ಭಾರತೀ ಗುರುಕುಲಮ್ ಶ್ರೀರಾಮಚಂದ್ರಾಪುರಮಠ ಹೊಸನಗರ ಇದರ ಪ್ರಧಾನಾಚಾರ್ಯರಾದ ವೇ . ಆಚಾರ ವಿಚಾರ ಗಜಾನನ ಭಟ್ ಇವರು ಶ್ರೀ ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು . ವೇ ವಿಶ್ವನಾಥ ಭಟ್ ಬಾಳೆಹಿತ್ಲು ಇವರು ಪೂಜಾ ಕೈಂಕರ್ಯ ನೆರವೇರಿಸಿದರು .

RELATED ARTICLES  `ವಿದ್ವಾನ್-ಗಾನ-ಸಂಮಾನ’ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ 29ಕ್ಕೆ