ಗೋಕರ್ಣ: ಮೈತ್ರೇಯಿ ಮಹಿಳಾ ಮಂಡಳದ 11 ನೇ ವಾರ್ಷಿಕೋತ್ಸವ ಸಮಾರಂಭವು ಗೋಕರ್ಣದ ಕೆಕ್ಕಾರ ಮಠದಲ್ಲಿ ಜರುಗಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಗಸೂರಿನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ರೇಖಾ ಭಟ್ಟ ಅವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದು ಗಂಡಸರಿಗೆ ಸರಿಸಮನಾಗಿ ಬೆಳೆಯುತ್ತಿದ್ದಾರೆ. ಆದರೆ ಇಂತಹ ಸುಶಿಕ್ಷಿತ ಆಧುನಿಕ ಸಮಾಜದಲ್ಲಿ ಕೂಡಾ ಹೆಣ್ಣಿನ ಮೇಲೆ ಅತ್ಯಾಚಾರ, ಬಾಲ್ಯವಿವಾಹ, ವರದಕ್ಷಿಣೆ ಪಿಡುಗಿನಂತಹ ಹೀನ ಕೃತ್ಯಗಳನ್ನು ನಡೆಸುತ್ತಾ ದೌರ್ಜನ್ಯ ಎಸಗುತ್ತಿರುವುದು ಖಂಡನೀಯ. ಇಂದಿನ ದಿನಗಳಲ್ಲಿ ಮಹಿಳೆಯರು ಎಚ್ಚೆತ್ತುಕೊಂಡು ತಮ್ಮ ಹಕ್ಕಿಗಾಗಿ ಹೋರಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಮಹಿಳೆಯರು ಒಗ್ಗಟ್ಟಾಗಿ ಸಂಘಟಿಸಿದ ಈ ಸಂಘದ 11 ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ಅರ್ಥಪೂರ್ಣ ಹಾಗೂ ಶ್ಲಾಘನೀಯವಾಗಿದೆ. ನಮ್ಮ ಬೇಕು ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಇಂತಹ ಸಂಘಟನೆಗಳ ಅಗತ್ಯತೆ ಇದೆ. ಹೆಣ್ಣುಮಕ್ಕಳು ಶಿಕ್ಷಣ, ಕ್ರೀಡೆ, ಸಾಂಸ್ಕøತಿಕ ಹೀಗೆ ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ದಾಪುಗಾಲಿಡುತ್ತಿದ್ದಾರೆ. ಹೆಣ್ಣು ಭ್ರೂಣಹತ್ಯೆ ಹಾಗೂ ಹೆಣ್ಣಿನ ಮೇಲಿನ ಇತರೇ ದೌರ್ಜನ್ಯದಿಂದ ಲಿಂಗ ತಾರತಮ್ಯ ಉಂಟಾಗಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಕೆಡಲಿದೆ. ಹೆಣ್ಣು ಮಕ್ಕಳ ರಕ್ಷಣೆಯಾಗಬೇಕು. ಅವರಿಗೆ ಶಿಕ್ಷಣ ನೀಡಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಬೇಟಿ ಬಚಾವೋ, ಬೇಟಿ ಪಢಾವೋ ಎಂಬ ಆಂದೋಲನವನ್ನು ಹುಟ್ಟು ಹಾಕಿದ್ದಾರೆ. ಗಂಡು ಮಕ್ಕಳಿಗೆ ಸಿಗುವಂತಹ ಅವಕಾಶ ಸೌಲಭ್ಯಗಳು ಹೆಣ್ಣು ಮಕ್ಕಳಿಗೂ ಸರಿಸಮನಾಗಿ ನೀಡಬೇಕು. ಸಾಕ್ಷಿ ಮಲ್ಲಿಕ್ , ಪಿ. ವಿ. ಸಿಂಧು, ಮೇರಿಕೋಮ್ ಮುಂತಾದ ಮಹಿಳೆಯರೂ ಕ್ರೀಡೆಯಲ್ಲಿ ಒಲಿಂಪಿಕ್ಸ್‍ನಲ್ಲಿ ಭಾಗವಹಿಸಿ ಸಾಧನೆಗೈದಿದ್ದಾರೆ. ಪ್ರಯತ್ನಿಸಿದರೆ ನಮ್ಮ ಹೆಣ್ಣು ಮಕ್ಕಳೂ ಕೂಡಾ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ.ಆದರೆ ಅವರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಬೇಕು ಎಂದರು.

RELATED ARTICLES  ಕೊಳಗಿ, ಮೋಹನರಿಗೆ ಕೃಷ್ಣ‌ ಸ್ಮರಣ ಪುರಸ್ಕಾರ

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾಧ ಜಾನಕಿ ಜೋಗಳೇಕರ , ಸಾವಿತ್ರಿ ಜಿ. ಜಂಬೆ, ನಿರ್ಮಲಾ ಕೆ. ಮಾರ್ಕಾಂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES  ಗುರು ಸುಧೀಂದ್ರ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸಿಕ್ಕಿತು ಭಾರೀ ಸ್ವಾಗತ

ಸಭಾ ಕಾರ್ಯಕ್ರಮದ ನಂತರ ಮೈತ್ರೇಯಿ ಬಳಗದ ಸಹೋದರಿಯರಿಂದ ಸಾಮೂಹಿಕ ಗೀತೆ, ನೃತ್ಯ, ಹಾಡು ಇತ್ಯಾದಿ ಮನರಂಜನಾ ಕಾರ್ಯಕ್ರಮಗಳು ಜರುಗಿತು.