ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಮೈದಾನಕ್ಕೆ ಇಳಿದಿದ್ದ ಯುವ ಪಡೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ನ್ಯೂಜಿಲೆಂಡ್ ನ ಬೇಓವಲ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್ ಗಳಿಂದ ಭಾರತ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಇದು ಕೋಚ್ ರಾಹುಲ್ ದ್ರಾವಿಡ್ ಅವರ ಪರಿಶ್ರಮಕ್ಕೆ ಸಿಕ್ಕ ಫಲ.
ಹೌದು ಯುವ ಪಡೆಯನ್ನು ಕಟ್ಟುವಲ್ಲಿ ರಾಹುಲ್ ದ್ರಾವಿಡ್ ಅವಿರತ ಶ್ರಮಿಸಿದ್ದಾರೆ. ಪಂದ್ಯಾವಳಿಯಲ್ಲಿ ತಂಡವನ್ನು ಚಾಂಪಿಯನ್ ಮಾಡಲೇಬೇಕು ಎಂಬ ಹಟದೊಂದಿಗೆ ಯುವ ಪಡೆಯೊಂದಿಗೆ ದ್ರಾವಿಡ್ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡಿದ್ದರು.
ಕಿರಿಯ ಕ್ರಿಕೆಟಿಗರ ಗಮನವೆಲ್ಲ ಆಟದತ್ತ ಹಾಗೂ ಗುರಿಯತ್ತ ಕೇಂದ್ರೀಕೃತವಾಗಬೇಕೆಂಬ ಉದ್ದೇಶದಿಂದ ಫೈನಲ್ ಪಂದ್ಯದ ತನಕ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಕೋಚ್ ದ್ರಾವಿಡ್ ಸೂಚಿಸಿದ್ದರು. ಇಂತಹ ಕಟ್ಟುನಿಟ್ಟಿನ ಆದೇಶಗಳನ್ನು ಪರಿಪಾಲಿಸಿದ್ದರಿಂದಲೇ ಇಂದು ಭಾರತ ತಂಡ ಚಾಂಪಿಯನ್ ಆಗಿದೆ.
0
ಇನ್ನು ಪಂದ್ಯಾವಳಿಯಲ್ಲಿ ಆಡಿದ್ದ 6 ಪಂದ್ಯಗಳಲ್ಲೂ ಭಾರತ ತಂಡ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. ಭಾರತ ಲೀಗ್ ಹಂತದ ಮೊದಲ ಪಂದ್ಯದಲ್ಲೇ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ತಾವು ಬಲಿಷ್ಠ ತಂಡ ಎಂಬುದನ್ನು ಸಾಬೀತುಪಡಿಸಿದ್ದರು.