ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಮಹದಾಯಿ ಬಗ್ಗೆ ಮಾತನಾಡಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದ್ದು, ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ಅಸಮಾಧಾನ ಮೂಡಿದೆ.

ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಅನುದಾನ ಬಳಕೆ ಮಾಡಿಕೊಳ್ಳದೇ ಇರುವುದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ಆದರೆ ಮಹದಾಯಿ ನೀರಿನ ವಿವಾದವನ್ನು ಬಗೆಹರಿಸುವುದಕ್ಕೆ ಸಂಬಂಧಿಸಿದಂತೆ ಒಂದೇ ಒಂದು ಶಬ್ದವನ್ನೂ ಮಾತನಾಡಲಿಲ್ಲ. ಇದು ಮಹದಾಯಿ ನೀರಿಗಾಗಿ ಹೋರಾಡುತ್ತಿರುವವರಲ್ಲಿ ತೀವ್ರ ಅಸಮಾಧಾನ ಮೂಡುವಂತೆ ಮಾಡಿದೆ.

RELATED ARTICLES  ಡಿಜೆವಿಎಸ್ ದೀವಗಿ ಪ್ರೌಢಶಾಲೆಯಲ್ಲಿ ವೇಗದ ಓದು-ಮೆಮೊರಿ ಕಾರ್ಯಕ್ರಮ ಯಶಸ್ವಿ "

ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರೆ ಹೊರಪಡಿಸಿ ಬೇರೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದರು, ಈ ಮೂಲಕ ಪರೋಕ್ಷವಾಗಿ ಮೋದಿಯವರು ಮಹದಾಯಿ ವಿವಾದ ಪ್ರಸ್ತಾಪಿಸುವುದಿಲ್ಲ ಎಂಬ ಸುಳಿವು ನೀಡಿದ್ದರು.

RELATED ARTICLES  ಪ್ರವಾಹ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಸರ್ಕಾರದಿಂದ 195 ಕೋಟಿ ಬಿಡುಗಡೆ.