ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭಾಷಣ ಸಂಬಂಧ ನಟಿ ಮತ್ತು ಕಾಂಗ್ರೆಸ್ ಮುಖಂಡರಾದ ರಮ್ಯಾ ಮಾಡಿದ್ದ ವ್ಯಂಗ್ಯಾತ್ಮಕ ಟ್ವೀಟ್ ಗೆ ನಟ ಮತ್ತು ಬಿಜೆಪಿ ಮುಖಂಡ ಜಗ್ಗೇಶ್ ತಿರುಗೇಟು ನೀಡಿದ್ದಾರೆ.

ಟ್ವಿಟರ್ ನಲ್ಲಿ ನಟಿ ರಮ್ಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ನಟ ಜಗ್ಗೇಶ್, ರಮ್ಯಾರನ್ನು ‘ಕನ್ನಡ ಬಾರದ ಕಾಡುಪಾಪ’ ಎಂದು ವ್ಯಂಗ್ಯ ಮಾಡಿದ್ದಾರೆ. “ದೊಡ್ಡವರ ಬಗ್ಗೆ ಮಾತಾಡ ಬೇಕಾದರೆ ಮಾತಾಡುವ ಮಂದಿಗೆ ವಯಸ್ಸು ಅನುಭವ ಸಾಧನೆ ಮಾಡಿ ಪಕ್ವವಾದಾಗ ಅಪಭ್ರಂಷ ಇಲ್ಲದೆ ಚರ್ಚೆ ಮಾಡಿದರೆ ಅದನ್ನ ತರ್ಕ ಎಂದು ಒಪ್ಪಿ ವಿಮರ್ಶೆ ಮಾಡಿ ನಿರ್ಣಯಸುತ್ತಾರೆ ಜನ.. ವಿಶ್ವದ ಬಲಿಷ್ಟರಾಷ್ಠ್ರದ ನಾಯಕರೆ ಪ್ರಧಾನಿ ಮೋದಿ ಅವರನ್ನು ಒಪ್ಪಿ ಮೆಚ್ಚಿದ್ದಾರೆ. ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬರದ ಕಾಡುಪಾಪದಂತೆ ಈಕೆ! ಎಂದು ಟ್ವೀಟ್ ಮಾಡಿದ್ದಾರೆ.

RELATED ARTICLES  ಭ್ರಷ್ಟಾಚಾರ : ಪಾಕ್ ಮಾಜಿ ಪ್ರಧಾನಿ ಷರೀಫ್ ಗೆ 7ವರ್ಷ ಜೈಲುಶಿಕ್ಷೆ.

ಮತ್ತೊಂದು ಟ್ವೀಟ್ ನಲ್ಲಿ ರಮ್ಯಾ ಅವರ ರಾಜತೀಯ ಪ್ರವೇಶವನ್ನು ವಿಮರ್ಶಿಸಿರುವ ಜಗ್ಗೇಶ್, “ಸ್ಟಾರ್ ಹೋಟಲಲ್ಲಿ ಕೂತು ಅಪ್ಪನ ದುಡ್ಡಲ್ಲಿ ಪಾರ್ಟಿಕೊಟ್ಟು ಪಾರ್ಟು ಗಿಟ್ಟಿಸಿ! ಪ್ರತಿಚಿತ್ರದ ಕ್ಯಾಚ್ಗೆ ಅದೆಸ್ಟಾರ್ ಹೋಟಲ್ ಪಾರ್ಟಿ! ದೊಡ್ಡವರ ನೆರಳಲ್ಲಿ ರಾಜಕೀಯ ಕ್ಯಾಚ್! ಆಮೇಲೆ ಮೆಟ್ಲೇರಕ್ಕೆ ಹೆಡ್ಡಾಫೀಸ್ ಕ್ಯಾಚ್ ಹಾಕ್ದೋರ್ಗೆ ಮೋದಿ ಆದರೇನು ಗಾಂದಿಆದರೇನು ಯಾರಿಗೆ ಬೇಕಾದರು ಹಂಗಿಸುತ್ತಾರೆ! ಕಾರಣ ಶ್ರಮವಿಲ್ಲದೆ ಪಲ್ಲಂಗ ಎರ್ದೋರಲ್ಲವೆ! ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

RELATED ARTICLES  ಇಂದಿನ ನಿಮ್ಮ ದಿನ ಹೇಗಿದೆ ಗೊತ್ತೇ? ಇಲ್ಲಿದೆ 11/05/2019ರ ರಾಶಿ ಫಲ