ಕಾರವಾರ: ಪಶು ಸಂಗೋಪನಾ ಇಲಾಖೆಯಲ್ಲಿ 4277 ‘ಡಿ’ ದರ್ಜೆ ಹುದ್ದೆಗಳ ಪೈಕಿ 4 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಪಶು ಸಂಗೋಪನಾ ಸಚಿವ ಎ ಮಂಜು ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿರುವರು.

ವಿದಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಹೊಸದಾಗಿ 476 ಪಶು ವೈದ್ಯಾಧಿಕಾರಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಿದ್ದು, ಈ ಅಬ್ಯರ್ಥಿಗಳ ಸ್ಥಳ ನಿಯುಕ್ತಿಗೊಳಿಸಿ ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ತಿಳಿಸಿದರು. ಇದು ಅಲ್ಲದೇ ಹೈದರಾಬಾದ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದ 126 ಪಶು ವೈದ್ಯಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಕೂಡಾ ಪ್ರಗತಿಯಲ್ಲಿದೆ ಎಂದು ತಿಳಿಸಿರುವರು. ರಾಜ್ಯದಲ್ಲಿರುವ 1512 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳ ಪೈಕಿ 302 ನ್ನು ಪಶು ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.

RELATED ARTICLES  ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಆತ್ಮಹತ್ಯೆಯ ಶಂಕೆ

ಗದಗ ಜಿಲ್ಲೆಯ ಸೊರಟೂರು ಗ್ರಾಮದ ಪಶು ಆಸ್ಪತ್ರೆಯ ಮೇಲ್ಛಾವಣಿ ಶಿಧಿಲಗೊಂಡಿದ್ದನ್ನು ಗ್ರಾಮ ಪಂಚಾಯತಿಯ ವತಿಯಿಂದ ದುರಸ್ತಿ ಮಾಡಲಾಗಿದೆ ಎಂದರು.