ಕುಮಟಾ: ಹೆಗಡೆಯ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಶತಮಾನೋತ್ಸವದ 2 ನೇ ದಿನದ ಕಾರ್ಯಕ್ರಮ ಸಂಪನ್ನವಾಗಿದೆ.

ಕಾರ್ಯಕ್ರಮವನ್ನು ಜಿ ಪಂ ಅಧ್ಯಕ್ಷೆ ಜಯಶ್ರೀ ಮೊಗೇರ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೀತಾ ಮುಕ್ರಿ ವಹಿಸಿದ್ದರು. ವೇದಿಕೆಯಲ್ಲಿ ಯುವ ಕಾಂಗ್ರೆಸ್ ಮುಖಂಡ ರವಿಕುಮಾರ್ ಶೆಟ್ಟಿ, ಬಿಜೆಪಿ ಮುಖಂಡ ಡಾ ಜಿ ಜಿ ಹೆಗಡೆ, ಶಿಕ್ಷಣ ಇಲಾಖೆ ಉಪನಿರ್ದೇಶಕರು ಡಯಟ್ ಈಶ್ವರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಜಿ ಮುಲ್ಲಾ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಆರ್ ಜಿ ಗುನಗಿ, ಹೊನ್ನಪ್ಪ ನಾಯಕ, ಎಸ್ ಡಿ ಎಮ್ ಸಿ ಅಧ್ಯಕ್ಷ ಲಕ್ಷ್ಮಣ ನಾಯ್ಕ, ಮುಖ್ಯಾಧ್ಯಾಪಕಿ ಮಂಗಲಾ ಹೆಬ್ಬಾರ್ ಉಪಸ್ಥಿತರಿದ್ದರು.

RELATED ARTICLES  ಕುಮಟಾದಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮಕ್ಕೆ ಚಾಲನೆ.

ಸಾಧಕರು ಹಾಗೂ ಶಿಕ್ಷಕರನ್ನು‌ ಸನ್ಮಾನಿಸಿ ಗೌರವಿಸಲಾಯಿತು.

ಶತಮಾನೋತ್ಸವ ಸಮಿತಿಯ ಅಮರನಾಥ ಭಟ್ಟ, ವಿನಾಯಕ ಪಟಗಾರ, ವಿನಾಯಕ ವೆರ್ಣೇಕರ್, ವೆಂಕಟೇಶ್ ನಾಯ್ಕ, ಸಿರಿ ನಾಯ್ಕ ಇತರರು ಉಪಸ್ಥಿತರಿದ್ದರು.

RELATED ARTICLES  ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಕವಲಕ್ಕಿಯಲ್ಲಿ ಕನ್ನಡ ರಾಜ್ಯೋತ್ಸವ