ಕುಮಟಾ:ಶಿವರಾತ್ರಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಶಿವರಾತ್ರಿ ಹಬ್ಬದಲ್ಲಿ ಉಪವಾಸಕ್ಕೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಹಣ್ಣುಗಳನ್ನು ಸೇವನೆ ಮಾಡಲಾಗುತ್ತದೆ. ಈ ಹಿನ್ನಲೆಯಲ್ಲಿ ವಿವಿಧ ಬಗೆಯ ಹಣ್ಣುಗಳಿಗೆ ಅದರಲ್ಲೂ ಕಲ್ಲಂಗಡಿ ಹಣ್ಣಿಗೆ ಹೆಚ್ಚಿನ ಬೇಡಿಕೆಇದೆ. ಬೇಸಿಗೆ ಆರಂಭವಾಗುತ್ತಿದ್ದು, ಬಿಸಿಲ ಬೇಗೆ ತಣಿಸಿಕೊಳ್ಳಲು ಜನರು ತಣಿಸಿಕೊಳ್ಳಲು ಜನರು ಸಹ ಹಣ್ಣುಗಳಿಗೆ ಮೊರೆ ಹೋಗುತ್ತಾರೆ. ಆದ್ದರಿಂದ ಕಲ್ಲಂಗಡಿ ಹಣ್ಣಿಗೆ ಬೇಸಿಗೆಯಲ್ಲಿ ಬೇಡಿಕೆ ಹೆಚ್ಚಾಗಿದೆ. ಅದಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಕಲ್ಲಂಗಡಿ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.
ಈ ಬಾರಿ ಹಣ್ಣುಗಳ ದರ ಕೈಗೆಟ್ಟುಕುವಂತಿದ್ದು, ಜನರಲ್ಲಿ ತುಸು ನೆಮ್ಮದಿ ನೀಡಿದೆ. ನಗರದ ಪ್ರಮುಖ ವೃತ್ತಗಳಲ್ಲಿ, ಮಾರುಕಟ್ಟೆಯಲ್ಲಿ, ರಸ್ತೆಗಳ ಅಕ್ಕ-ಪಕ್ಕದಲ್ಲಿ ಕಲ್ಲಂಗಡಿ ಹಣ್ಣುಗಳ ಮಾರಾಟ ಹೆಚ್ಚಾಗಿದೆ. ಉಳಿದಂತೆ ಸೇಬು, ಕಿತ್ತಳೆ, ದಾಳಿಂಬೆ, ಬಾಳೆ ಹಣ್ಣು, ಸಪೋಟ ಸೇರಿದಂತೆ ವಿವಿಧ ಬಗೆಯ ಹಣ್ಣುಗಳಿಗೂ ಬೇಡಿಕೆ ಹೆಚ್ಚಾಗಿದೆ. ದರವೂ ಸಹ ಸಂತಸದಿಂದಲೇ ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದಾರೆ.
ಇನ್ನು ವ್ಯಾಪಾರಸ್ಥರೂ ಸಹ ವ್ಯಾಪಾರ ಹೆಚ್ಚದ ಸಂತೋಷದಲ್ಲಿದ್ದಾರೆ. ಹಣ್ಣುಗಳ ದರ ಕಡಿಮೆ ಇರುವುದರಿಂದ ಗ್ರಾಹಕರು ಹೆಚ್ಚಾಗಿ ಹಣ್ಣುಗಳನ್ನು ಖರೀದಿಸುತ್ತಿದ್ದಾರೆ. ಇದರಿಂದ ನಮಗೆ ಅಷ್ಟೇನು ನಷ್ಟವಾಗಿಲ್ಲ ಎನ್ನುತ್ತಾರೆ ವ್ಯಾಪಾರಿ ಗಣಪತಿ.
ಈ ಬಾರಿ ನಗರದ ಮಾಲ್ ಗಳಲ್ಲೂ ಸಹ ಕಡಿಮೆ ದರದಲ್ಲಿ ವಿವಿಧ ಬಗೆಯ ಹಣ್ಣುಗಳು ಮಾರಾಟವಾಗುತ್ತಿವೆ.ಈ ಬಾರಿ ಶಿವರಾತ್ರಿ ಹಬ್ಬದಂದು ಜನರಿಗೆ ಹಣ್ಣುಗಳ ಸುಗ್ಗಿಯಾಗುವುದರಲ್ಲಿ ಎರಡು ಮಾತಿಲ್ಲ.