ಯೂತ್ ಸ್ಟಾರ್ಸ್ ಸ್ಪೋಟ್ರ್ಸ ಕ್ಲಬ್, ಮೊರಬಾ ಇವರ ಆಶ್ರಯದಲ್ಲಿ ಹಳ್ಳೇರ ಸಮಾಜದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಮೊರಬಾದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಪಂದ್ಯಾವಳಿಯನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶ್ರೀ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಹಳ್ಳೇರ ಸಮಾಜದ ಯುವಕರು ಒಗ್ಗಟ್ಟಿನೊಂದಿಗೆ ಈ ಪಂದ್ಯಾವಳಿಯನ್ನು ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ. ಯಾವುದೇ ಒಂದು ಯಾವುದೇ ಅಭಿವೃದ್ಧಿ ಹೊಂದಬೇಕಾದರೆ ಆ ಸಮಾಜ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕøತಿಕವಾಗಿ ಮುಂದುವರಿಯಬೇಕು. ಸಮಾಜದಲ್ಲಿ ಇಂತಹ ಕ್ರೀಡಾ ಚಟುವಟಿಕೆಗಳು ಜರುಗಿದಾಗ ಪರಸ್ಪರರಲ್ಲಿ ಹೊಂದಾಣಿಕೆ ಉಂಟಾಗುತ್ತದೆ. ಪ್ರತಿಯೊಬ್ಬರೂ ಕೂಡಾ ಉತ್ತಮ ಆರೋಗ್ಯವನ್ನು ಹೊಂದಬೇಕಾದರೆ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಹಾಗೂ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಸಮಾಜದ ವತಿಯಿಂದ ಜರುಗುವ ಎಲ್ಲಾ ಕಾರ್ಯಕ್ರಮಗಳಿಗೆ ತಮ್ಮ ಸಂಪೂಣ್ ಸಹಾಯ ಸಹಕಾರ ಇರುವುದಾಗಿ ನುಡಿದರು.

RELATED ARTICLES  ಖಾಸಗಿ ಬಸ್ ಮರಕ್ಕೆ ಡಿಕ್ಕಿ : ಚಾಲಕ ಸಾವು : 25 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಪೆಟ್ಟು.

ಕ್ರೀಡಾಂಗಣವನ್ನು ಉದ್ಘಾಟಿಸಿದ ಯುವ ಮುಖಂಡ ರವಿಕುಮಾರ ಶೆಟ್ಟಿ, ಡಾ|| ಜಿ.ಜಿ. ಹೆಗಡೆ ಅವರುಗಳು ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಮಾತನಾಡಿ ಅತ್ಯಂತ ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲೂ ಹಳ್ಳೇರ ಸಮಾಜದ ವತಿಯಿಂದ ಇಂತಹ ಕಾರ್ಯಕ್ರಮಗಳು ಜರುಗಲಿ ಎಂದು ಹಾರೈಸಿದರು.

RELATED ARTICLES  ಸಂಘಟನೆಗಳು ಬಡ ಜನರಿಗೆ ಸರಕಾರದ ಸೌಲಭ್ಯ ತಲುಪಿಸುವಲ್ಲಿಯೂ ಶ್ರಮಿಸಬೇಕು - ನಾಗರಾಜ ನಾಯಕ ತೊರ್ಕೆ

ಈ ಸಂದರ್ಭದಲ್ಲಿ ಟ್ರೋಫಿ ಉದ್ಘಾಟಕರಾಗಿ ಆಗಮಿಸಿದ ಜಿ. ಪಂ. ಸದಸ್ಯ ಪ್ರದೀಪ ನಾಯಕ ದೇವರಬಾವಿ, ಬೀರಣ್ಣ ನಾಯಕ, ವೆಂಕಟ್ರಮಣ ಕವರಿ, ಅರುಣ ಕವರಿ ತೊರ್ಕೆ, ರಾಜು ಗಾಂವಕರ, ಬೊಮ್ಮಯ್ಯ ಹಳ್ಳೇರ, ಸುಧಾಕರ ಹಳ್ಳೇರ ಮುಂತಾದವರು ಉಪಸ್ಥಿತರಿದ್ದರು.