ಕುಮಟಾ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಶತಮಾನೋತ್ಸವ ಸಮಿತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ಸಂಘ ಇವರ ಜಂಟಿ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಸಂತೇಗುಳಿಯ “ಶತಮಾನೋತ್ಸವ ಸಮಾರಂಭ-2018” ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಶತಮಾನೋತ್ಸವದ ದಿನದಂದು ಶಾಲೆಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನೂರು ವರ್ಷಗಳ ಮೊದಲೇ ಶಿಕ್ಷಣ ಪ್ರೇಮ ಮೆರದ ಜನತೆ ಗೌರವಾರ್ಹರು ಎಂದರು.
ಕಾರ್ಯಕ್ರಮವನ್ನು ಕುಮಟಾ & ಹೊನ್ನಾವರ ಕ್ಷೇತ್ರದ ಶಾಸಕರು ಹಾಗೂ ಅಧ್ಯಕ್ಷರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಶ್ರೀಮತಿ ಶಾರದಾ ಮೋಹನ್ ಶೆಟ್ಟಿ ಉಧ್ಘಾಟಿಸಿ ನೂತನ ಕೊಠಡಿ ಯನ್ನು ಉಧ್ಘಾಟಿಸಿ ಹಳೆಯ ಹಿರಿಯ ವಿದ್ಯಾರ್ಥಿಗಳನ್ನು & ಶಿಕ್ಷಕರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು,ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.