ಬೆಂಗಳೂರು: ಕನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಇಂದು ಹೊರಬೀಳಲಿದೆ.
ಈ ವಿಶೇಷ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠ 2016 ಅಕ್ಟೋಬರ್ ನಿಂದ ಆರಂಭಿಸಿ, 2017 ಸೆಪ್ಟೆಂಬರ್ ನಲ್ಲಿ ಪೂರ್ಣಗೊಳಿಸಿತ್ತು. ಕಾವೇರಿ ವಿವಾದಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಅಮಿತ್ ರಾಯ್, ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನಡೆಸಿತ್ತು. ಇಂದು ಹೊರಬೀಳಲಿರುವ ಕಾವೇರಿ ತೀರ್ಪಿಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ಇಲ್ಲಿ ನೀಡಲಿದೆ.