ಕಾರವಾರ: ದಾಂಡೇಲಿಯ ಕುವೇಶಿ ಕ್ಯಾಸಲ್‍ರಾಕ್ ವನ್ಯಜೀವಿ ವಲಯದಲ್ಲಿ ಕರ್ನಾಟಕ ಅರಣ್ಯ ಇಲಾಖೆ, ಕಾಳಿ ಹುಲಿ ಸಂರಕ್ಷಿತ ಪ್ರದೇಶ, ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಫೆ.18 ರಂದು ಮಧ್ಯಾಹ್ನ 3 ಗಂಟೆಗೆ ಕೆನೋಪಿ ವಾಕ್ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಉದ್ಘಾಟನೆಯನ್ನು ನೆರವೇರಿಸಲಿದ್ದು ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಆರ್. ವಿ. ದೇಶಪಾಂಡೆ ಅಧ್ಯಕ್ಷತೆ ವಹಿಸುವರು.
ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ, ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಯಾಂಕ ಖರ್ಗೆ, ಶಾಸಕರಾದ ಸತೀಶ ಕೃಷ್ಣಾ ಸೈಲ್, ವಿಶ್ವೇಶ್ವರ ಹೆಗೆಡೆ ಕಾಗೇರಿ, ಶಿವರಾಮ ಹೆಬ್ಬಾರ, ಮಂಕಾಳು ವೈದ್ಯ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೊಗೇರ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರು.