ಕುಮಟಾ : ತಾಲೂಕಿನ ಗೋಕರ್ಣದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ(PWD) ಇಲಾಖೆಯ ಅಂದಾಜು 1 ಕೋಟಿ ಅನುದಾನದ ಸರ್ಕ್ಯೂಟ್ ಹೌಸ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಕ್ಷೇತ್ರದ ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಶ್ರೀಮತಿ ಶಾರದಾ ಮೋಹನ್ ಶೆಟ್ಟಿಯವರು ಪಂಚಾಯತ್ ಸದಸ್ಯರ, ಅಧಿಕಾರಿಗಳ ಹಾಗೂ ಊರ ನಾಗರಿಕರ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಂದಾಜು 1 ಕೋಟಿ ಅನುದಾನದ ಸರ್ಕ್ಯೂಟ್ ಹೌಸ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲು ಸಂತಸ ಎನಿಸುತ್ತಿದೆ.ಜನತೆಯ ಆಶೀರ್ವಾದ ಸದಾ ನಮ್ಮ ಮೇಲೆ ಇರುವಂತೆ ನಾವು ಆಶಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ತೊರ್ಕ ಗ್ರಾ. ಪಂ. ಅಧ್ಯಕ್ಷೆ ಸುಮಿತ್ರಾ ಗೌಡ, ಮೋಹನ್ ನಾಯಕ, ವಿಜಯ ಹೊಸ್ಕಟ್ಟಾ , ಬೀರಣ್ಣ ನಾಯ್ಕ ಹಾಗೂ ಆನಂದ ನಾಯ್ಕ ಇದ್ದರು.