ಕುಮಟಾ: ತಾಲೂಕಿನ ಮೈದಾನದಲ್ಲಿ ಹಾಲಕ್ಕಿ ಒಕ್ಕಲಿಗರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಹಾಲಕ್ಕಿ ಸಮಾಜದ ಸಂಘಟನೆಯಲ್ಲಿ ಯಶಸ್ವಿಯಾದ ಪಂದ್ಯಾವಳಿ ಅಚ್ಚುಕಟ್ಟಾಗಿ ಮೂಡಿ ಬಂತು.
ಬಹುಮಾನ ವಿತರಣಾ ಸಮಾರಂಭದಲ್ಲಿ ಯುವ ಮುಖಂಡ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ರವಿಕುಮಾರ ಶೆಟ್ಟಿ, ಬಿಜೆಪಿ ಮುಖಂಡರಾದ ನಾಗರಾಜ ನಾಯಕ ತೊರ್ಕೆ,ಮಾಜಿ ಶಾಸಕರಾದ ದಿನಕರ ಶೆಟ್ಟಿ, ಜೆಡಿಎಸ್ ಮುಖಂಡ ಪ್ರದೀಪ ನಾಯಕ, ಬಿಜೆಪಿ ಪ್ರಮುಖ ವೆಂಕಟ್ರಮಣ ಹೆಗಡೆ ವಿಜೇತ ತಂಡಕ್ಕೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮಧುಸೂಧನ ಶೇಟ್ ಹಾಗೂ ಕಸಾಪ
ತಾಲೂಕಾ ಅಧ್ಯಕ್ಷ ಶ್ರೀಧರ ಉಪ್ಪಿನ ಗಣಪತಿ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.