ಶಿರಸಿ: ಮುಂಬರುವ ವಿಧಾನಸಭಾ ಚುನಾವಣೆಗೆ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಿಂದ ಜಾತ್ಯಾತೀತ ಜನತಾದಳದ ಅಭ್ಯರ್ಥಿಯಾಗಿ ಹಿರಿಯ ವಕೀಲ ಎ.ರವೀಂದ್ರ ನಾಯ್ಕ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಘೋಷಣೆ ಮಾಡಿದ್ದಾರೆಂದು ತಿಳಿದು ಬಂದಿದೆ.

RELATED ARTICLES  ಮಹಾಬಲೇಶ್ವರನ ದರ್ಶನ ಪಡೆದ ಕಾಗೇರಿ.

ಇಂದು ಬೆಂಗಳೂರಿನ ಯಲಹಂಕದಲ್ಲಿ ಜರುಗಿದ ಕುಮಾರಪರ್ವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ, ಬಿ.ಎಸ್.ಪಿ. ಪಕ್ಷದ ಅಧ್ಯಕ್ಷೆ ಮಾಯಾವತಿ ಇವರ ಸಮಕ್ಷಮದಲ್ಲಿ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಬಿಡುಗಡೆಗೊಳಿಸಿದ 126 ವಿಧಾನಸಭಾ ಕ್ಷೇತ್ರದ ಪ್ರಥಮ ಪಟ್ಟಿಯಲ್ಲಿ ರವೀಂದ್ರ ನಾಯ್ಕರ ಹೆಸರು ಘೋಷಿಸಲಾಗಿದೆ.

RELATED ARTICLES  ಯಲ್ಲಾಪುರದಲ್ಲಿಂದು 7 ಮಂದಿಗೆ ಕೊರೊನಾ ಪಾಸಿಟಿವ್

ಕಳೆದ ಮೂರು ದಶಕದಿಂದ ಸಾಮಾಜಿಕ ಕಳಕಳಿಯ ಮದ್ಯಪಾನ ವಿರೋಧಿ ಜಾಗೃತಿ, ಅರಣ್ಯವಾಸಿಗಳ ಸಮಸ್ಯೆಗೆ ಸ್ಪಂದಿಸಿ ಸಾರ್ವತ್ರಿಕ ಹಾಗೂ ಕಾನೂನಾತ್ಮಕ ಹೋರಾಟಗಳೊಂದಿಗೆ ಕಾರ್ಯ ನಿರ್ವಹಿಸಿದವರಾಗಿದ್ದು, ಹಾಲಿ ಶಿರಸಿ ವಕೀಲರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.