ಬೆಂಗಳೂರು: ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರನ ಬಂಧನ ಇದುವರೆಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಪೊಲೀಸ್ ಆದಿಕಾರಿಗಳ ಎತ್ತಂಗಡಿ ಪ್ರಹಸನ ನಡೆದಿದೆ.
ನಿನ್ನೆ ರಾತ್ರಿ 8 ಗಂಟೆಯವರೆಗೆ ಮೊಹಮ್ಮದ್ ನಲಪಾಡ್ ಬಂಧನಕ್ಕೆ ಪೊಲೀಸರಿಗೆ ಗಡುವು ವಿಧಿಸಲಾಗಿತ್ತು. ಆದರೆ ಆತ ತಲೆಮರೆಸಿಕೊಂಡು ಇದುವರೆಗೆ ಪತ್ತೆಯಾಗಿಲ್ಲ ಎಂದೇ ಪೊಲೀಸರು ಹೇಳುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ. ಇಂದು ಮಲಪಾಡ್ ನೇರವಾಗಿ ಪೊಲೀಸರಿಗೆ ಶರಣಾಗಬಹುದು ಎಂಬ ನಿರೀಕ್ಷೆಯಿದೆ. ಒಂದು ವೇಳೆ ಆತ ಇಂದು ಕೋರ್ಟ್ ಗೆ ಹಾಜರಾದರೆ ಜಾಮೀನಿನ ಮೇಲೆ ಬಿಡುಗಡೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.