ಸುಳ್ಯ: ಪದವಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಅದೇ ಕಾಲೇಜಿನ ವಿದ್ಯಾರ್ಥಿ ಚೂರಿಯಿಂದ ಇರಿದು ಕೊಲೆಗೈದ ಘಟನೆ ಸುಳ್ಯದಲ್ಲಿ ಇಂದು ಸಂಜೆ 4:30ರ ಸುಮಾರಿಗೆ ನಡೆದಿದೆ.

ಸುಳ್ಯ ಎನ್‌ಎಂಸಿ ಕಾಲೇಜಿನ ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಅಕ್ಷತಾ ಕೊಲೆಯಾದವರು. ಇದೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ನೆಲ್ಲೂರು ಕೆಮ್ರಾಜೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಕಾರ್ತಿಕ್ ಕೊಲೆ ಆರೋಪಿಯಾಗಿದ್ದಾನೆ.

RELATED ARTICLES  ಹೊಸ ಪ್ರಶ್ನೆ ಪತ್ರಿಕೆ ಮಾದರಿಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯವಾಗಲಿ: ರಾಮಪ್ಪ ಸಿ.

ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರ ನಿವಾಸಿಯಾಗಿದ್ದ ಅಕ್ಷತಾ ಇಂದು ಸಂಜೆ ಕಾಲೇಜಿನಿಂದ ಬರುತ್ತಿದ್ದ ರೋಟರಿ ಶಾಲೆಯ ಬಳಿ ಆರೋಪಿ ಕಾರ್ತಿಕ್ ಈ ಕೃತ್ಯ ಎಸಗಿದ್ದಾನೆನ್ನಲಾಗಿದೆ. ಅಕ್ಷತಾಳಿಗೆ ಏಳು ಬಾರಿ ಚೂರಿಯಿಂದ ಇರಿದ ಆರೋಪಿ ತಾನು ಕೂಡಾ ಕೈಯನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನೆನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿ ಅಕ್ಷತಾರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

RELATED ARTICLES  ಕುಮಟಾದ ವಿಲಾಶ್ ಮಾರ್ಬಲ್ಸ್ ಮಾಲಕ ಅಪಘಾತದಲ್ಲಿ ಸಾವು.

ಕೈಗೆ ಗಾಯ ಮಾಡಿಕೊಂಡಿರುವ ಕಾರ್ತಿಕ್‌ನನ್ನು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆಗೆ ಸ್ಪಷ್ಟ ಕಾರಣ ತಿಳಿದಿಲ್ಲವಾದರೂ, ಪ್ರೇಮ ವೈಫಲ್ಯದಿಂದ ಆಗಿರಬೇಕೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಳ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.